ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಶುಕ್ಲಪಕ್ಷ/ದ್ವಾದಶಿ ತಿಥಿ/
ಮಂಗಳವಾರ/ಉತ್ತರಾಷಾಢ ನಕ್ಷತ್ರ /
ದಿನಾಂಕ 10.09.2019
°•°•°•°•°•°
ಮೇಷ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಿರಿಯ ಅಧಿಕಾರಿಗಳಿಂದ ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°•°•°•°•°•°
ವೃಷಭ
ಆಹಾರದಿಂದಾಗಿ ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊರಗಿನ ಆಹಾರವನ್ನು ಸೇವಿಸಬೇಡಿ.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°•°•°•°•°•°
ಮಿಥುನ
ವಾಹನ ಪ್ರಯಾಣ ಮಾಡಬೇಕಾದ ಅಂತಹ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ದೂರ ಪ್ರಯಾಣ ಮಾಡಬೇಕಾದಂತಹ ಪರಿಸ್ಥಿತಿ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುತ್ತದೆ
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°•°•°•°•°•°
ಕರ್ಕಾಟಕ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯಲಿದೆ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ತೊಂದರೆಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°•°•°•°•°•°
ಸಿಂಹ
ಮಾನಸಿಕವಾಗಿ ಕುಗ್ಗದೆ ಉತ್ತಮ ಧೈರ್ಯದಿಂದ ಮುನ್ನಡೆದಲ್ಲಿ ಉತ್ತಮ ಗುರಿಯನ್ನು ತಲುಪುವಿರಿ.ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°•°•°•°•°•°
ಕನ್ಯಾ
ಮನೆಯಲ್ಲಿ ಗಲಾಟೆ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಕಲಹಗಳಿಗೆ ಎಡೆ ಮಾಡಿಕೊಡಬೇಡಿ. ಭೂಮಿ ವಿಚಾರದಲ್ಲಿ ಮೋಸ ನಡೆಯುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°•°•°•°•°•°
ತುಲಾ
ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ .ಹಿರಿಯ ಅಧಿಕಾರಿಗಳಿಂದ ಒತ್ತಡ, ಅಸಂತೃಪ್ತಿಯ ಮಾತುಗಳು ಕಂಡುಬರುವುದು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°•°•°•°•°•°
ವೃಶ್ಚಿಕ
ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ ಅಧಿಕಾರಿಗಳಿಗೆ ಸಂಕಷ್ಟಗಳು ಎದುರಾಗುತ್ತದೆ. ಮಾಡುವಂತಹ ಕೆಲಸ ಕಾರ್ಯವನ್ನು ನಿಷ್ಠೆಯಿಂದ ಮುಂದುವರಿಸಿಕೊಂಡು ಬಂದಲ್ಲಿ ಮಾತ್ರ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°•°•°•°•°•°
ಧನು
ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°•°•°•°•°•°
ಮಕರ
ನೂತನ ವ್ಯವಹಾರವನ್ನು ತೊಡಗಿಸಿಕೊಂಡವರಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುವುದು
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°•°•°•°•°•°
ಕುಂಭ
ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಮೋಸ ನಡೆಯುತ್ತದೆ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°•°•°•°•°•°
ಮೀನ
ವ್ಯವಹಾರ ಕ್ಷೇತ್ರದಲ್ಲಿ ಮೋಸ ನಡೆಯುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಶ್ರದ್ಧೆಯಿಂದ ಕೆಲಸವನ್ನು ಮುನ್ನಡೆಸಿಕೊಂಡು ಬನ್ನಿ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°•°•°•°•°•°
{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}