ಶ್ವಾಸ ಸಂಬಂಧಿ ತೊಂದರೆಗಳು,ಚರ್ಮ ಸಂಬಂಧಿ ತೊಂದರೆಗಳು ಇರುವವರು ಏನು ಮಾಡಬೇಕು..

ದಿನ ಭವಿಷ್ಯ

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಶುಕ್ಲಪಕ್ಷ/ಚತುರ್ದಶಿ ತಿಥಿ/
ಗುರುವಾರ/ಧನಿಷ್ಠ ನಕ್ಷತ್ರ /

ದಿನಾಂಕ 12.09.2019

°~•~°~•~°~•~°~•~°~•~°

ಮೇಷ
ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

ವೃಷಭ
ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||

°~•~°~•~°~•~°~•~°~•~°

ಮಿಥುನ

ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ. ದೂರ ಪ್ರಯಾಣ ಮಾಡಬೇಕಾದಂತಹ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಎದುರಾಗುತ್ತದೆ

ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||

°~•~°~•~°~•~°~•~°~•~°

ಕರ್ಕಾಟಕ
ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಲಾಭ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಬಿರುದ್ದಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°

ಸಿಂಹ

ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ಮಾಡು ಅಂತ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತದೆ
ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

°~•~°~•~°~•~°~•~°~•~°

ಕನ್ಯಾ

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಶ್ವಾಸ ಸಂಬಂಧಿ ತೊಂದರೆಗಳು, ಚರ್ಮರೋಗ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ

ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||

°~•~°~•~°~•~°~•~°~•~°

ತುಲಾ

ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಹಣಕಾಸು ವಿಚಾರದಲ್ಲಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ

ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||

°~•~°~•~°~•~°~•~°~•~°

ವೃಶ್ಚಿಕ

ಉದ್ಯೋಗ ಕ್ಷೇತ್ರದಲ್ಲಿ ಸಹಾಯದಿಂದ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

ಧನು

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||

°~•~°~•~°~•~°~•~°~•~°

ಮಕರ

ಶ್ವಾಸ ಸಂಬಂಧಿ ತೊಂದರೆಗಳು, ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

°~•~°~•~°~•~°~•~°~•~°

ಕುಂಭ

ಆರೋಗ್ಯದಲ್ಲಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದೂರ ಪ್ರಯಾಣ ಮಾಡುವುದು ಉತ್ತಮವಲ್ಲ.

ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°

ಮೀನ

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆ ಗೊಳ್ಳಲಿದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *