ವಿವಾಹ ಭಾಗ್ಯ ಯಾವ ರಾಶಿಯವರಿಗೆ ಇದೆ..

ದಿನ ಭವಿಷ್ಯ

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಕೃಷ್ಣಪಕ್ಷ/ದ್ವಿತೀಯ ತಿಥಿ/
ಸೋಮವಾರ/ರೇವತಿ ನಕ್ಷತ್ರ /

ದಿನಾಂಕ 16.09.2019

°•°•°•°•°•°

ಮೇಷ

ಮಾನಸಿಕ ಒತ್ತಡಕ್ಕೆ ಒಳಗಾಗಬೇಕಾಗುತ್ತದೆ. ಧೈರ್ಯಗೆಡದೆ ಕುಂದದೆ ಮುನ್ನಡೆಯಬೇಕು. ಆರೋಗ್ಯದಲ್ಲಿ ವ್ಯತ್ಯಾಸಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||

°•°•°•°•°•°

ವೃಷಭ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಉತ್ತಮ ಕಾರ್ಯಗಳಿಗೆ ಹಣವನ್ನು ವಿನಿಯೋಗಿಸಿ

ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°•°•°•°•°•°

ಮಿಥುನ

ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಗೌರವ ಉನ್ನತ ಸ್ಥಾನಮಾನ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||

°•°•°•°•°•°

ಕರ್ಕಾಟಕ

ತಂದೆಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಸಂತಸದ ವಾತಾವರಣ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರಲಿದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||

°•°•°•°•°•°

ಸಿಂಹ

ಆರೋಗ್ಯಕ್ಕೆ ಸಂಬಂಧಪಟ್ಟಂತಹ ಸಮಸ್ಯೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣ ವ್ಯವಹಾರದಲ್ಲಿ ನಷ್ಟ ಎದುರಿಸಬೇಕಾಗುತ್ತದೆ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ

ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

°•°•°•°•°•°

ಕನ್ಯಾ

ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರಲಿದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಉತ್ತಮ ಆರೋಗ್ಯವನ್ನು ಹೊಂದುವಿರಿ ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯುತ್ತದೆ

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

°•°•°•°•°•°

ತುಲಾ

ಉದ್ಯೋಗ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಕರ್ತವ್ಯವನ್ನು ನಿಭಾಯಿಸಿ ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ

ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°•°•°•°•°•°

ವೃಶ್ಚಿಕ

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ಉನ್ನತ ಕಾರ್ಯಗಳಿಗಾಗಿ ಹಣವನ್ನು ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.

ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||

°•°•°•°•°•°

ಧನು

ವ್ಯವಹಾರಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°•°•°•°•°•°

ಮಕರ

ಆಹಾರದಿಂದಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊರಗಿನ ಕಲ್ಮಶ ಆಹಾರವನ್ನು ಸೇವಿಸಬೇಡಿ. ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ ಇತರರ ಸಹಾಯವನ್ನು ಪಡೆದುಕೊಳ್ಳಿ

ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

°•°•°•°•°•°

ಕುಂಭ

ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ನಿಭಾಯಿಸಿಕೊಂಡು ಬಂದಲ್ಲಿ ಮಾತ್ರ ಅಭಿವೃದ್ಧಿ ದೊರೆಯಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳನ್ನು ಹೊಂದಬೇಕಾಗುತ್ತದೆ

ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||

°•°•°•°•°•°

ಮೀನ

ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುವುದು

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||

°•°•°•°•°•°

{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *