ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ಪೂರ್ಣಿಮಾ ತಿಥಿ/
ಮಂಗಳವಾರ/ ಆಶ್ಲೇಷಾ ನಕ್ಷತ್ರ /
ದಿನಾಂಕ: 19.02.2019
°~•~°~•~°~•~°~•~°~•~°
ಮೇಷ
ಶಿಲ್ಪಿಗಳು, ಗೃಹ ನಿರ್ಮಾಣ ಕೆಲಸದವರು, ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ವ್ಯವಹಾರದಲ್ಲಿ ನೂತನ ಬದಲಾವಣೆ ಕಂಡುಬರುವುದು. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಮಾಡುವಂತಹ ಕೆಲಸಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ನಷ್ಟವನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸಗಳ ಆಗುವ ಲಕ್ಷಣಗಳು ಇರುವುದರಿಂದ ಹೆಚ್ಚು ನೀರನ್ನು ಸೇವಿಸಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ
ಜಪಿಸಲು:
ಸರ್ವದೇವಮಯೇ ದೇವಿ
ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಕೃಷಿಕರಿಗೆ ಉತ್ತಮ ಬೆಳೆ ಆಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುವಿರಿ. ವಿದ್ಯಾರ್ಥಿಗಳು ತಮ್ಮ ಸ್ವಪ್ರಯತ್ನದಿಂದ ಅಭಿವೃದ್ಧಿಯನ್ನು ಪಡೆದುಕೊಳ್ಳುತ್ತಾರೆ. ಗುರುಹಿರಿಯರ ಆಶೀರ್ವಾದ ಪಡೆಯಿರಿ.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ
ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ಕೃಷಿ ಕ್ಷೇತ್ರದಲ್ಲಿ ಇರುವವರಿಗೆ, ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಮನಶ್ಶಾಂತಿ ದೊರೆಯುವುದು. ಯುವಕ ಯುವತಿಗೆ ವಿವಾಹ ಯೋಗ ಬರಲಿದೆ. ಉತ್ತಮ ಆರೋಗ್ಯ ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಉತ್ತಮವಾದ ಫಲ ಪಡೆಯುತ್ತಾರೆ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:
°~•~°~•~°~•~°~•~°~•~°
ಸಿಂಹ
ಕೈಗೊಳ್ಳುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಆರ್ಥಿಕವಾಗಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಬರುವ ಸಮಸ್ಯೆಯಿಂದಾಗಿ ಮನಶ್ಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಶ್ರದ್ಧೆಯಿಂದ ಕೆಲಸಗಳನ್ನು ಮಾಡಿ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ವ್ಯವಹಾರದಲ್ಲಿ ಮೋಸ ಹೋಗುವ ಸಾಧ್ಯತೆಗಳಿದ್ದು ಜಾಗರೂಕತೆಯಿಂದ ಇರಿ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಗಳಿದ್ದು ಜಾಗರೂಕತೆಯಿಂದಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು:
ವಸುದೇವಸುತಂ ದೇವಂ
ಕಂಸಚಾಣೂರ-ಮರ್ದನಮ್ |
ದೇವಕೀ-ಪರಮಾನಂದಂ
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು, ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು:
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡಿ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:
ಸುಬ್ರಮಣ್ಯ-ಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು:
ಅಖಂಡಮಂಡಲಾಕಾರಂ
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ, ವ್ಯಾಪಾರಸ್ಥರಿಗೆ ಮತ್ತು ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿದಲ್ಲಿ ಮಾತ್ರ ಶುಭ.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿಯ ಲಕ್ಷಣಗಳು ಕಂಡುಬರುವುದು. ದಾಂಪತ್ಯಜೀವನದಲ್ಲಿ ಶಾಂತಿ-ನೆಲೆಸುತ್ತದೆ. ಶೀತ, ಜ್ವರ, ಕಫ, ಕೆಮ್ಮು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಹಿರಿಯರ ಮಾರ್ಗದರ್ಶನದಂತೆ ಮುಂದುವರಿಯಿರಿ.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿಗಳು ಕಂಡುಬಂದರೂ ಆಲಸ್ಯತನದಿಂದ ಕೆಲವೊಂದು ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಆಗುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}