ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಪ್ರತಿಪತ್ ತಿಥಿ/
ಬುಧವಾರ/ ಮಘಾ ನಕ್ಷತ್ರ /
ದಿನಾಂಕ: 20.02.2019
°~•~°~•~°~•~°~•~°~•~°
ಮೇಷ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಹಾಗೂ ನೂತನ ವ್ಯವಹಾರವನ್ನು ತೊಡಗಿಸಿ ಕೊಳ್ಳುವವರಿಗೆ ಅವಕಾಶಗಳು ಒದಗಿ ಬರಲಿದೆ. ಭೂ ಸಂಬಂಧಿ ವ್ಯವಹಾರ ಉಳ್ಳವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಂಡುಬರುತ್ತದೆ. ಶ್ರದ್ಧೆಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿ. ಗೃಹಪಯೋಗಿ ವಸ್ತುಗಳನ್ನು ಖರೀದಿ ಮಾಡಲು ಅವಕಾಶಗಳು ಒದಗಿ ಬರುತ್ತದೆ. ನೂತನ ವಾಹನ ಖರೀದಿಗೆ ಸುಸಮಯ.ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಮೂತ್ರ ಸಂಬಂಧಿ ತೊಂದರೆಗಳು, ಜ್ವರ, ಕುತ್ತಿಗೆ ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು:
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಹೋಟೆಲ್ ವ್ಯವಹಾರ, ಜಲ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು, ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಸ್ನೇಹಿತರಿಂದ ಸಹಾಯ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯತನ ಮನೆ ಬಿಟ್ಟು ಮುಂದುವರಿದಲ್ಲಿ ಮಾತ್ರ ಉತ್ತಮವಾದ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು:
ದೇವತಾಕಾರ್ಯಸಿದ್ಧ್ಯರ್ಥಂ
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಂ
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ. ಭೂಮಿ ಸಂಬಂಧಿ ವ್ಯವಹಾರ ಮಾಡುವವರು ಹಾಗೂ ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಅಧಿಕ ಏಳಿಗೆ ಲಭ್ಯವಾಗಲಿದೆ. ಆರ್ಥಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ಮೈ ಕೈ ಗಂಟು ನೋವು, ಮಲಬದ್ಧತೆ, ಕಣ್ಣು ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಉತ್ತಮ ಫಲಿತಾಂಶದಿಂದ ಹಿರಿಯರ ಆಶೀರ್ವಾದ ಕೆ ಪಾತ್ರರಾಗುತ್ತೀರಿ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:
°~•~°~•~°~•~°~•~°~•~°
ಸಿಂಹ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ, ಕೆಲಸ ಕಾರ್ಯಗಳಲ್ಲಿ ಉತ್ತಮ ಸ್ಥಾನಮಾನ ಲಭ್ಯವಾಗಲಿದೆ. ಆರ್ಥಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ ||
°~•~°~•~°~•~°~•~°~•~°
ಕನ್ಯಾ
ಮಾಡುವಂತಹ ಕೆಲಸ ಕಾರ್ಯ ಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು. ಮೊಬೈಲ್ ಟಿವಿ ಮುಂತಾದುವುಗಳಿಂದ ದೂರ ಇರಬೇಕು
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು:
ವಸುದೇವಸುತಂ ದೇವಮ್
ಕಂಸಚಾಣೂರ-ಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನೂತನವಾದ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ವಿಚಾರದಲ್ಲಿ ನಿಧಾನ ಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು:
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ, ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಮನಶಾಂತಿ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ, ಖರ್ಚುವೆಚ್ಚಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಾಹನ ಪ್ರಯಾಣಗಳ ಸಂದರ್ಭದಲ್ಲಿ ಜಾಗರೂಕತೆಯಿಂದದಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉದಾಸೀನತೆಯನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:
ಸುಬ್ರಮಣ್ಯ-ಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಶ್ರದ್ಧೆಯಿಂದ ಕೆಲಸವನ್ನು ಮಾಡಿದಲ್ಲಿ ಮಾತ್ರ ಅಭಿವೃದ್ಧಿ ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣ ಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ಎದೆ ನೋವು, ಮೂತ್ರ ಸಂಬಂಧಿತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮವಾಗಿ ನೀರನ್ನು ಕುಡಿಯಿರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು:
ಅಖಂಡಮಂಡಲಾಕಾರಂ
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳುಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮರೋಗ, ಅಲರ್ಜಿ, ಅಜೀರ್ಣ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಮುಂದುವರಿಯಬೇಕು
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ಕೆಲಸ ಕಾರ್ಯದಲ್ಲಿ ಸ್ಥಾನಮಾನ ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ನೂತನ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಶೀತ ಜ್ವರ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಶೀತ ಜ್ವರ, ಕಫ, ದೇಹದಲ್ಲಿ ಉಷ್ಣತೆ, ಅಜೀರ್ಣ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}