ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಅಷ್ಠಮಿ ತಿಥಿ/
ಬುಧವಾರ/ಜ್ಯೇಷ್ಠಾ ನಕ್ಷತ್ರ /
ದಿನಾಂಕ27.02..2019
°~•~°~•~°~•~°~•~°~•~°
ಮೇಷ
ವ್ಯಾವಹಾರಿಕವಾದ ಮುನ್ನಡೆ ಕಂಡುಬಂದರೂ ಕೂಡ ಉದ್ಯೋಗ ಕ್ಷೇತ್ರದಲ್ಲಿ ಮನಃಶಾಂತಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ವಿದ್ಯಾರ್ಥಿಗಳು ಏಳಿಗೆಯನ್ನು ಸಾಧಿಸುತ್ತಾರೆ. ಸಂಗೀತ, ನೃತ್ಯ, ಮುಂತಾದವುಗಳನ್ನು ಕಲಿಯುವವರಿಗೆ ಅವಕಾಶಗಳು ಒದಗಿ ಬರುತ್ತದೆ.
ಪರಿಹಾರ :
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಽಸ್ತುತೇ ||
°~•~°~•~°~•~°~•~°~•~°
ವೃಷಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಉತ್ತಮ ಸ್ಥಾನಮಾನಗಳು ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಉತ್ತಮ ಮನಃಶಾಂತಿ ದೊರೆಯಲಿದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಪ್ರಯತ್ನಪಡಬೇಕು.
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಮಿಥುನ
ತಮ್ಮ ಉದಾಸೀನತೆ ಯಿಂದಾಗಿ ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಪಡೆದುಕೊಳ್ಳುವುದು. ಮಾಡುವಂತಹ ಕೆಲಸ ಕಾರ್ಯವನ್ನು ಶ್ರದ್ಧೆಯಿಂದ ಮಾಡಿ. ಆರ್ಥಿಕವಾದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಸಾಲ ಮಾಡಬೇಕಾದ ಅಂತಹ ಪರಿಸ್ಥಿತಿ ಒದಗಿ ಬಂದೀತು. ದಾಂಪತ್ಯ ಜೀವನದಲ್ಲಿ ಕಲಹವನ್ನು ಎದುರಿಸಬೇಕಾಗುತ್ತದೆ. ಶೀತ ಜ್ವರ, ಕಫ, ಕೆಮ್ಮು ಮುಂತಾದವುಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು:
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ಸ್ವಂತ ವ್ಯವಹಾರ ವಹಿವಾಟುಗಳಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಕೂಡ ತೊಂದರೆ ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುತ್ತದೆ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರೆದಲ್ಲಿ ಮಾತ್ರ ಏಳಿಗೆ ಲಭ್ಯವಾಗಲಿದೆ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋಽಸ್ತು ತೇ ||
°~•~°~•~°~•~°~•~°~•~°
ಸಿಂಹ
ವ್ಯಾವಹಾರಿಕ ಕ್ಷೇತ್ರಗಳಲ್ಲಿ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಕಂಡು ಬರುವುದು. ಮೈ ಕೈ ಗಂಟು ನೋವು, ಹೊಟ್ಟೆ ನೋವು ಮುಂತಾದತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ
°~•~°~•~°~•~°~•~°~•~°
ಕನ್ಯಾ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಡೆತಡೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಮೈ ಗಂಟು ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ ಲಭ್ಯವಾಗಲಿದೆ.
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ಸಮಾಜದಲ್ಲಿ ಹಾಗೂ ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನ ಮಾನಗಳು ದೊರೆಯಲಿದೆ. ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಏಳಿಗೆ ಕಂಡು ಬರಬಹುದು. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ತೊಂದರೆ ಏನು ಎದುರಿಸಬೇಕಾಗುತ್ತದೆ. ಸಹೋದರನ ಆಗಮನದಿಂದ ಸಂತಸ ಕಂಡುಬರುವುದು. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ವಿದ್ಯಾರ್ಥಿಗಳು ಮುಂದುವರೆದರೆ ಮಾತ್ರ ಏಳಿಗೆ ಲಭ್ಯವಾಗಲಿದೆ.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ತೊಡಗಿಸಿಕೊಂಡ ಕೆಲಸದಲ್ಲಿ ವಿಘ್ನ ಕಂಡುಬರುತ್ತದೆ. ಉದಾಸೀನತೆಯಿಂದ ಕೆಲವೊಂದು ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಕೋಪವನ್ನು ನಿಯಂತ್ರಿಸಿ. ವಿದ್ಯಾರ್ಥಿಗಳು ತಮ್ಮ ಆಲಸ್ಯತನ ವನ್ನು ಬಿಟ್ಟು ಕಠಿಣ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷೀಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
ಮಕರ
ನೂತನ ಸ್ಥಾನಮಾನಗಳು, ವ್ಯಾವಹಾರಿಕ ಕ್ಷೇತ್ರದಲ್ಲಿ ಉನ್ನತ ಹುದ್ದೆ, ಉತ್ತಮ ಗೌರವ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುವುದು. ಆರೋಗ್ಯದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪರಿಶ್ರಮದಿಂದ ಏಳಿಗೆಯನ್ನು ಪಡೆಯುತ್ತಾರೆ.
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕುಂಭ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ವ್ಯಾವಹಾರಿಕ ಕ್ಷೇತ್ರಗಳಲ್ಲಿ ಅಡೆತಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹವನ್ನು ಎದುರಿಸಬೇಕಾಗುತ್ತದೆ. ಪ್ರಯಾಣದಲ್ಲಿ ಅಡೆತಡೆ ಎದುರಾಗುತ್ತದೆ. ಆರೋಗ್ಯದಲ್ಲಿ ಹಿನ್ನಡೆ ಕಂಡುಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}