ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ದ್ವಾದಶಿ ತಿಥಿ/
ರವಿವಾರ/ಉತ್ತರಾಷಾಡಾ ನಕ್ಷತ್ರ /
ದಿನಾಂಕ 03.03..2019
°~•~°~•~°~•~°~•~°~•~°
ಮೇಷ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರಲಿದೆ, ಉತ್ತಮ ಸ್ಥಾನಮಾನ ಹಾಗೂ ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ:
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||
°~•~°~•~°~•~°~•~°~•~°
ವೃಷಭ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯ ಭಾಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಮಿಥುನ
ಮಾಡುವಂತಹ ಕೆಲಸದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ನಷ್ಟ ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಕಂಡುಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು:
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್|
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗ ಕ್ಷೇತ್ರದಲ್ಲಿ ನೂತನ ಅವಕಾಶಗಳು ಒದಗಿ ಬರುತ್ತದೆ. ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಗೌರವ, ಸ್ಥಾನಮಾನಗಳು ಒದಗಿಬರಲಿದೆ. ಹಣಕಾಸಿನ ವಿಚಾರದಲ್ಲಿ ಸಣ್ಣ ಪುಟ್ಟ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||
°~•~°~•~°~•~°~•~°~•~°
ಸಿಂಹ
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಮೈ ಕೈ ಗಂಟು ನೋವು ಮುಂತಾದ ತೊಂದರೆಗಳನ್ನುಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ
°~•~°~•~°~•~°~•~°~•~°
ಕನ್ಯಾ
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಎದುರಿಸ ಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಪುಟ್ಟ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು, ಸ್ಥಾನಮಾನ ಹಾಗು ಗೌರವಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಚರ್ಮ ಸಂಬಂಧಿ ತೊಂದರೆಗಳು ಅಲರ್ಜಿ ಮುಂತಾದ ತೊಂದರೆ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದರೆ ಉತ್ತಮ ಅಭಿವೃದ್ಧಿ ಕಂಡುಬರುವುದು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ವ್ಯವಹಾರಿಕ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುವುದು. ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
ಮಕರ
ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಉತ್ತಮ ಸ್ಥಾನಮಾನ ಗೌರವಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಸಲಿದೆನೆಲೆಸಲಿದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕ.
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕುಂಭ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಶೀತ ಜ್ವರ, ಕಫ, ಗಂಟಲು ನೋವು, ಮುಂತಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ಮಾಡುವಂತಹ ಕೆಲಸ ಕಾರ್ಯದಲ್ಲಿ ಅಡೆತಡೆ ಕಂಡುಬರುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ಉದರ ಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವು, ಚರ್ಮ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಏಳಿಗೆಯನ್ನು ಪಡೆಯುತ್ತಾರೆ.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು:
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}