|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

05.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಚತುರ್ದಶಿ ತಿಥಿ/

ಮಂಗಳವಾರ/ಧನಿಷ್ಠಾ ನಕ್ಷತ್ರ /

ದಿನಾಂಕ 05.03..2019

 °~•~°~•~°~•~°~•~°~•~°

 

ಮೇಷ

 

          ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉನ್ನತ ಅಭಿವೃದ್ಧಿ ಕಂಡು ಬಂದರೂ ಕೂಡ ಶಾಂತಿಯನ್ನು ಕಳೆದು ಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಯನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಅಭಿವೃದ್ಧಿ ಕಂಡು ಬರುವುದು. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ವ್ಯಾವಹಾರಿಕ ಕ್ಷೇತ್ರದಲ್ಲಿ ಕಷ್ಟ ನಷ್ಟಗಳು, ಅಡೆತಡೆಗಳು, ಶತ್ರುಭಯ, ರಾಜ ಭಯ, ಆಂತರಿಕ ಕಲಹಗಳು ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕ ವ್ಯವಸ್ಥೆಯಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಎದುರಾಗುತ್ತದೆ. ಹೆಂಡತಿಯ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟೂ ಮುಂದುವರಿಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ತೊಡಗಿಸಿಕೊಂಡ ಕಾರ್ಯಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ, ವ್ಯವಹಾರವನ್ನು ಮಾಡುವವರಿಗೆ ನೂತನ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ.  ಮೈ ಕೈ ಗಂಟು ನೋವು, ಬೆನ್ನು ನೋವು, ಮಲಬದ್ಧತೆ ಮುಂತಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಮಾಡುವಂತಹ ಕೆಲಸ ಕಾರ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ  ನೆಲೆಗೊಳ್ಳುವುದು. ಆರೋಗ್ಯದಲ್ಲಿ ತೊಂದರೆ ಎದುರಾಗುವುದು. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      

 


ಕನ್ಯಾ


    ತಾವು ತೊಡಗಿಸಿ ಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ.  ಹಣಕಾಸಿನವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       

 


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಕಂಡು ಬರುವುದು. ಉತ್ತಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°

 


ವೃಶ್ಚಿಕ


  
 ಮಾಡುವಂತಹ ಕೆಲಸಗಾರರಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುವುದು. ಹಾಗೂ ಸಂಬಂಧಿಸಿದಂತಹ ಹಣವನ್ನು ಉತ್ತಮ  ಕಾರ್ಯ ಗಳಿಗೋಸ್ಕರ ವಾಗಿ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು  ಮುಂದುವರೆದರೆ ಮಾತ್ರ ಏಳಿಗೆ ಲಭ್ಯವಾಗಲಿದೆ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°

 


ಧನು


   ತಮ್ಮ ಆಲಸ್ಯತನ ಹಾಗೂ ನಿರ್ಲಕ್ಷ್ಯದಿಂದ ಉದ್ಯೋಗದಲ್ಲಿ ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣ ಕಾಸಿನ ವಿಚಾರದಲ್ಲಿ ಬರುವಂತಹ  ತೊಂದರೆಯಿಂದಾಗಿ ಕುಟುಂಬದಲ್ಲಿ ಕಲಹ ಗಳು ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ  ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು. ಗುರುಹಿರಿಯರು ಗೌರವವಿರಲಿ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°

 


ಮಕರ


    ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಅಭಿವೃದ್ಧಿಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳಗಳು ಸಂಭವಿಸು ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          

 


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷ ನಲ್ಲಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ಬಿಟ್ಟು ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ತಾವು ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು, ಉನ್ನತ ಅಧಿಕಾರಿಗಳಿಂದ ಕಿರುಕುಳ, ಬೈಗುಳಗಳು ಕೇಳಿ ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ ಗಳು ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}