|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

12.03.2108

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಷಷ್ಠಿ ತಿಥಿ/

ಮಂಗಳವಾರ/ಕೃತ್ತಿಕಾ ನಕ್ಷತ್ರ /

ದಿನಾಂಕ 12.03.2019

 °~•~°~•~°~•~°~•~°~•~°

ಮೇಷ

          ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೂತ್ರ ಸಂಬಂಧಿ ತೊಂದರೆಗಳು,  ಉಷ್ಣ ಮೊದಲಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟೂ ಮುಂದುವರಿಯಬೇಕು.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ನೂತನ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡುಬರುವುದು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ತಾವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಷ್ಟವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಪತಿ/ ಪತ್ನಿಯ ಆರೋಗ್ಯದಲ್ಲಿ ಏರುಪೇರುಗಳ ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು  ಮುಂದುವರಿಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ. ಕೃಷಿಕರು ಹಾಗೂ ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಆರೋಗ್ಯದಲ್ಲಿ ಏರು ಪೇರುಗಳ ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ  ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಉತ್ತಮ ಸ್ಥಾನಮಾನಗಳು ದೊರೆಯಲಿದೆ. ನೂತನ ವ್ಯವಹಾರ ಆರಂಭಿಸುವವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಸ್ಥರು ನಷ್ಟವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯ  ತನ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಆಲಸ್ಯತನ ಬಿಟ್ಟು ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು. ಗುರುಹಿರಿಯರನ್ನು ಗೌರವಿಸಿ

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ಮಾಡುವಂತಹ ಕೆಲಸ ಕಾರ್ಯಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ  ಅಡೆತಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹವನ್ನು ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಗೃಹಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾಗಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾಗಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}