23.01.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ / ತೃತೀಯ ತಿಥಿ /

ಬುಧವಾರ / ಮಘಾ ನಕ್ಷತ್ರ /

ದಿನಾಂಕ:  23.01.2019

 °~•~°~•~°~•~°~•~°~•~°

ಮೇಷ

  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ ಪಡೆಯುವಿರಿ. ಹೊಸ ವ್ಯವಹಾರಕ್ಕೆ ಕೈ ಹಾಕಲು ಸಮಯ ಉತ್ತಮವಾಗಿದೆ. ಆರ್ಥಿಕ ವ್ಯವಸ್ಥೆಯಲ್ಲಿ  ಏಳಿಗೆ ಕಾಣುವಿರಿ. ದಾಂಪತ್ಯದಲ್ಲಿ ಸಣ್ಣ ಕಲಹವಿದ್ದರೂ ಸುಖ ಅನುಭವಿಸುವಿರಿ. ಆರೋಗ್ಯದಲ್ಲಿ ಸಣ್ಣ ಹಿನ್ನಡೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

  ಉದ್ಯೋಗ ವ್ಯವಹಾರಿಕ ಕ್ಷೇತ್ರಗಳಲ್ಲಿ ಉತ್ತಮ ಮುನ್ನಡೆ ಕಾಣುವಿರಿ. ಹೊಸ ವಿಚಾರಗಳಿಂದ ಎಲ್ಲರ ಮನ ಗೆಲ್ಲುವಿರಿ. ಹೊಸ ವಾಹನ, ವಸ್ತ್ರಒಡವೆಗಳ ಯೋಗಭಾಗ್ಯ ಒದಗಿಬರುವುದು. ತಾಯಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣುವುದು. ತಾಯಿಯಿಂದ ಸಂತೋಷದ ವಾರ್ತೆಯನ್ನು ಕೇಳುವಿರಿ. ದಾಂಪತ್ಯ ಜೀವನದಲ್ಲಿ ಸುಖ ಅನುಭವಿಸುವಿರಿ. ಆರೋಗ್ಯದಲ್ಲಿ ಮುನ್ನಡೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ವ್ಯಾವಹಾರಿಕ ಕೆಲಸಕಾರ್ಯದಲ್ಲಿ  ಹಿನ್ನಡೆ ಕಂಡುಬರುವುದು. ಕೈಗೊಂಡ ಕೆಲಸಗಳಲ್ಲಿ ವಿಘ್ನ ಕಂಡುಬರುತ್ತದೆ. ಆರ್ಥಿಕವಾಗಿ ಹಿನ್ನಡೆ ಪಡೆಯುವಿರಿ.  ಸಹೋದರನಿಂದ ಧನಸಹಾಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಆಲಸ್ಯತನವನ್ನು ಬಿಟ್ಟು ಮುಂದುವರೆದಲ್ಲಿ ಶುಭ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯಾವಹಾರಿಕ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ. ಕೆಲಸ ಕಾರ್ಯದಲ್ಲಿ ತೊಂದರೆ ಕಂಡುಬರುವುದು. ಆರ್ಥಿಕ ಮುನ್ನಡೆ ಕಂಡುಬರುತ್ತದೆ. ಆರೋಗ್ಯದಲ್ಲಿ ಶೀತ,ಜ್ವರ, ಮೈ ಕೈ ತುರಿಕೆ ಮುಂತಾದ ಅಲರ್ಜಿ ಸಂಬಂಧಿ ಕಾಯಿಲೆಗಳು ಕಂಡುಬರುವ ಲಕ್ಷಣ. ದಾಂಪತ್ಯದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ  ಫಲಿತಾಂಶ ಕಂಡುಬರುವುದು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ವ್ಯವಹಾರಿಕ ಕ್ಷೇತ್ರಗಳಲ್ಲಿ ಅತಿ ಉತ್ತಮ ಬದಲಾವಣೆ ಕಾಣುವಿರಿ. ಹೊಸ ಉದ್ಯೋಗಕ್ಕೆ ಅವಕಾಶ ದೊರೆಯುವುದು. ಆರ್ಥಿಕ ಮುನ್ನಡೆ ಕಾಣುವುದು. ಮಾನಸಿಕ ಗೊಂದಲಗಳನ್ನು ಬಿಟ್ಟು ಮುನ್ನಡೆಯಿರಿ. ದಾಂಪತ್ಯದಲ್ಲಿ ಸುಖ. ಆರೋಗ್ಯದಲ್ಲಿ ಮುನ್ನಡೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಕೆಲಸಕಾರ್ಯಗಳಲ್ಲಿ ಹಿನ್ನಡೆ ಪಡೆಯುವಿರಿ.  ವ್ಯವಹಾರ ಕ್ಷೇತ್ರದಲ್ಲಿ ಕಿರಿಕಿರಿ ಎದುರಿಸಬೇಕಾಗುತ್ತದೆ.  ಆರ್ಥಿಕವಾಗಿ ತೊಂದರೆ ಇದ್ದರೂ ಕೂಡ ಹಿರಿಯರಿಂದ ಸಹಾಯ ಒದಗಿ ಬರುವುದು. ದಾಂಪತ್ಯದಲ್ಲಿ ವಿಘ್ನ ಕಂಡುಬರುತ್ತದೆ. ಮಾನಸಿಕ ನೆಮ್ಮದಿ ಕಳೆದುಕೊಳ್ಳುವಿರಿ.  ಆರೋಗ್ಯದಲ್ಲಿ ಹಿನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಲಭ್ಯ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ವ್ಯಾವಹಾರಿಕ ಮುನ್ನಡೆ ಕಾಣುವಿರಿ.  ಆರ್ಥಿಕ ಮುನ್ನಡೆ ಪಡೆಯುವಿರಿ. ಕುಟುಂಬದಲ್ಲಿ ಶಾಂತಿ ನಡೆಯುವುದು. ದಾಂಪತ್ಯದಲ್ಲಿ ಸುಖ ಕಾಣುವಿರಿ. ಆರೋಗ್ಯದಲ್ಲಿ ಮಂದಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ. ನೂತನ ಕಾರ್ಯಗಳನ್ನು ತೊಡಗಿಸಿಕೊಳ್ಳಲು ಅವಕಾಶ. ಮನಶ್ಶಾಂತಿ ದೊರೆಯುವುದು. ಆರ್ಥಿಕ ಹಿನ್ನಡೆ. ದಾಂಪತ್ಯದಲ್ಲಿ ಸುಖ. ಯುವಕ-ಯುವತಿಯರಿಗೆ ವಿವಾಹದ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಆಲಸ್ಯ ಬಿಟ್ಟು  ಮುಂದುವರೆದಲ್ಲಿ ಶುಭ.



ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ಕಾರ್ಯಕ್ಷೇತ್ರದಲ್ಲಿ ಹಿನ್ನಡೆ ಕಾಣುವಿರಿ. ಹಿರಿಯ ಅಧಿಕಾರಿಗಳಿಂದ ತೊಂದರೆ. ಮಾನಸಿಕ ಕಿರಿಕಿರಿ. ಆರ್ಥಿಕವಾದ ತೊಂದರೆ. ದಾಂಪತ್ಯ ಜೀವನದಲ್ಲಿ ನಿಧಾನಗತಿಯ ಮುನ್ನಡೆ. ಗುರುಹಿರಿಯರಿಗೆ ಗೌರವ ಸಲ್ಲಿಸಿ. ಆರೋಗ್ಯದಲ್ಲಿ ಹಿನ್ನಡೆ. ವಿದ್ಯಾರ್ಥಿಗಳಿಗೆ ಆಲಸ್ಯ ಬಿಟ್ಟು ಮುಂದುವರೆದಲ್ಲಿ ಮಾತ್ರ ಶುಭ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ತಾವು ನಡೆಸುವ ಕಾರ್ಯದಲ್ಲಿ ನಿಧಾನಗತಿಯ ಮುನ್ನಡೆ. ವ್ಯವಹಾರದಲ್ಲಿ ಅಡೆತಡೆ ಬರುತ್ತದೆ. ಆರ್ಥಿಕವಾಗಿ ಹಿನ್ನಡೆಯುವಿರಿ. ದಾಂಪತ್ಯದಲ್ಲಿ ಕಲಹ. ಮಾನಸಿಕ ಕಿರಿಕಿರಿ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯಾವಹಾರಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಣುತ್ತದೆ. ಕೆಲಸ ಕಾರ್ಯಗಳಲ್ಲಿ ಏಳಿಗೆ ಕಾಣುತ್ತದೆ.   ಆರ್ಥಿಕವಾದ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ. ದಾಂಪತ್ಯದಲ್ಲಿ ಸುಖ.. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಮಂದಗತಿಯ ಹಿನ್ನಡೆ. ಹಣಕಾಸಿನ ವಿಚಾರದಲ್ಲಿ ಮಂದಗತಿಯ ಮುನ್ನಡೆ. ಉದಾಸೀನತೆಯಿಂದ ಅವಕಾಶವನ್ನು ಕಳೆದುಕೊಳ್ಳಬೇಡಿ. ಶೀತ, ಜ್ವರ, ತಲೆನೋವು ಉದರ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆಗಳು. ದಾಂಪತ್ಯದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *