ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ಷಷ್ಠಿ ತಿಥಿ /
ಮಂಗಳವಾರ/ಅನೂರಾಧಾ ನಕ್ಷತ್ರ/
ದಿನಾಂಕ: 26.03.2019
°~•~°~•~°~•~°~•~°~•~°
ಮೇಷ
ಮಾಡುತ್ತಿರುವ ವೃತ್ತಿಯಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಜಗಳಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಅಲರ್ಜಿ, ಶ್ವಾಸ ಸಂಬಂಧಿ ತೊಂದರೆ, ರಕ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾಭ್ಯಾಸದಲ್ಲಿ ವಿಘ್ನ ಬರುವ ಸಾಧ್ಯತೆಗಳಿರುವುದರಿಂದ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿಉತ್ತಮ ಅಭಿವೃದ್ಧಿ ಕಂಡು ಬರುವುದು. ವೃಥಾ ಖರ್ಚುವೆಚ್ಚಗಳು ಒದಗಿ ಬರುವುದರಿಂದ ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಮಾತಿನ ಮೂಲಕ ಜಗಳ ಸಂಭವಿಸುವ ಲಕ್ಷಣಗಳು ಇರುವುದರಿಂದ ಮಾತಿನಲ್ಲಿ ನಿಗಾ ಇರಲಿ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ಆಲಸ್ಯ ತನವನ್ನು ಬಿಟ್ಟೂ ಮುಂದುವರೆದರೆ ಮಾತ್ರ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಉದ್ಯೋಗ ವ್ಯವಹಾರಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಶೀತ ಜ್ವರ, ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ತಲೆನೋವು ಕಣ್ಣು ನೋವು, ಮೈ ಕೈ ಗಂಟು ನೋವು ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ ಹಾಗೂ ಉತ್ತಮ ಕಾರ್ಯದಲ್ಲಿ ಗೋಸ್ಕರ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ .ಗಂಟು ನೋವು ತಲೆನೋವು ಮೊದಲಾದ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ವಿಘ್ನ ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಕಂಡುಬರುವುದು. ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಯಾವುದೇ ಕೆಲಸ ತೊಡಗಿಸಿಕೊಂಡರು ಕೂಡ ಕಷ್ಟ ನಷ್ಟ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ, ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತವೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ವಿಘ್ನ ಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಉತ್ತಮ ಶ್ರದ್ಧೆಯಿಂದ ಹಾಗೂ ಏಕಾಗ್ರತೆಯಿಂದ ತೊಡಗಿಸಿಕೊಂಡಲ್ಲಿ ಮಾತ್ರ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಕೆಲಸ ಕಾರ್ಯಗಳಲ್ಲಿ ಇತರರಿಂದ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ಹದಗೆಡುವ ಲಕ್ಷಣಗಳಿವೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗೃತರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸಿ ತನವನ್ನು ಬಿಟ್ಟೂ ಮುಂದುವರಿಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಅಲರ್ಜಿ,ಶ್ವಾಸ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುತ್ತದೆ.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು, ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉತ್ತಮ ಶ್ರದ್ಧೆ ಹಾಗೂ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}