|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

28.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ಅಷ್ಠಮಿ ತಿಥಿ /

ಗುರುವಾರ/ಮೂಲಾ ನಕ್ಷತ್ರ/

ದಿನಾಂಕ: 28.03.2019

 °~•~°~•~°~•~°~•~°~•~°

ಮೇಷ

        ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು ಹಾಗೂ ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ  ಮಾನಸಿಕವಾದಂತಹ ನೆಮ್ಮದಿ ಕಳೆದುಕೊಳ್ಳ ಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ.ಮಾನಸಿಕ ತೊಂದರೆ ಎದುರಾಗುತ್ತದೆ.  ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿಯನ್ನು ಕಂಡು ಬಂದರೂ ಕೂಡ ಮಾನಸಿಕವಾದ ನೆಮ್ಮದಿ ಕಳೆದುಕೊಳ್ಳ ಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಶೀತ ಜ್ವರ, ಮಾನಸಿಕ ಖಿನ್ನತೆ, ಮೊದಲಾದ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

 ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಏಳಿಗೆ ಕಂಡು ಬರುವುದು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗುತ್ತದೆ ಹಾಗೂ ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ವಿಘ್ನ ಎದುರಾಗುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು  ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಬರುವುದು ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ‌. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}