01.04.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ದ್ವಾದಶಿ ತಿಥಿ /

ಸೋಮವಾರ/ಧನಿಷ್ಠ ನಕ್ಷತ್ರ/

ದಿನಾಂಕ: 01.04.2019

 °~•~°~•~°~•~°~•~°~•~°

ಮೇಷ

        ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುವುದು.ಉತ್ತಮ ಏಕಾಗ್ರತೆಯಿಂದ  ತಮ್ಮ ಕೆಲಸ ಕಾರ್ಯವನ್ನು ತೊಡಗಿಸಿಕೊಳ್ಳಿ. ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ತಾವು ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತವೆ. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ  ಮುಂದುವರಿಯಬೇಕು.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ

ಜಪಿಸಲು :
ಧರಣೀಗರ್ಭ-ಸಂಭೂತಂ ವಿದ್ಯುತ್ಕಾಂತಿ-ಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್

°~•~°~•~°~•~°~•~°~•~°

    

ವೃಷಭ

         ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಸಮಾಜದಲ್ಲಿ ಉತ್ತಮ ಗೌರವ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಾಹನ ಪ್ರಯಾಣದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಂ (ಸಮಾಭಾಸಂ) ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರ-ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್

°~•~°~•~°~•~°~•~°~•~°



ಮಿಥುನ


   ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಒಳಗಾಗುವಿರಿ. ವ್ಯಾವಹಾರಿಕವಾದ ಹಿನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಹಾಗೂ ಇದರಿಂದಾಗಿ ಕುಟುಂಬದಲ್ಲಿ ಕಲಹ  ಏರ್ಪಡುವ ಲಕ್ಷಣಗಳು ಕಂಡು ಬರುವುದು. ದಂಪತಿಗಳ ನಡುವೆ ಸಣ್ಣ ಪುಟ್ಟ ಕಲಹಗಳು ಬರುತ್ತದೆ. ಕಣ್ಣಿಗೆ ಸಂಬಂಧಿಸಿದ ತೊಂದರೆಗಳು, ನರ ಸಂಬಂಧಿ ತೊಂದರೆ, ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗು-ಕಲಿಕಾ-ಶ್ಯಾಮಂ ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯ-ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ |

  °~•~°~•~°~•~°~•~°~•~°



ಕರ್ಕಾಟಕ

   
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ನೂತನ ವ್ಯವಹಾರವನ್ನು  ಆರಂಭಿಸುವವರಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ನರ ಸಂಬಂಧಿ ತೊಂದರೆ, ಮೈ ಕೈ ಗಂಟು ನೋವು, ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು

ಜಪಿಸಲು :
ದಧಿಶಂಖ-ತುಷಾರಾಭಂ ಕ್ಷೀರೋದಾರ್ಣವ-ಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟ-ಭೂಷಣಮ್ |

 °~•~°~•~°~•~°~•~°~•~°



ಸಿಂಹ

 ಮಾಡುವಂತಹ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ  ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಶೀತ ಜ್ವರ, ಕಣ್ಣು ನೋವು, ತಲೆನೋವು ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮ-ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರೀಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ಹಿರಿಯ ಅಧಿಕಾರಿಗಳಿಂದ  ಅಸಮಾಧಾನ ತೆ ಯ ಮಾತುಗಳು ಕೇಳಿ ಬರುತ್ತದೆ. ಉತ್ತಮ ಪರಿಶ್ರಮದಿಂದ ಕೆಲಸವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ ಸಾಲ ಮಾಡಬೇಕಾದ ಅಂತಹ ಪರಿಸ್ಥಿತಿ ಎದುರಾಗುವುದರಿಂದ ಜಾಗರೂಕತೆಯಿಂದ ಇರಬೇಕು. ಕಣ್ಣು ನೋವು ತಲೆನೋವು ಮೊದಲಾದ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ

ಜಪಿಸಲು :
ವಂದೇ ವೃಂದಾವನಚರಂ ವಲ್ಲವೀಜನವಲ್ಲಭಮ್
ಜಯಂತೀ ಸಂಭವಂ ಧಾಮ ವೈಜಯಂತೀ  ವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ  ಅಡೆತಡೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ವಿಘ್ನಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ  ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ನರಸಂಬಂಧಿ ತೊಂದರೆಗಳು, ತಲೆನೋವು, ಕಣ್ಣು ನೋವು  ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ ಹಾಗೂ ತಮಗೆ ಬರಬೇಕಾದ ಅಂತಹ  ಹಣವು ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಪಿತ್ತ ಸಂಬಂಧಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ

ಜಪಿಸಲು :
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಶ್ವಾಸ ಸಂಬಂಧಿ ತೊಂದರೆ, ಅಲರ್ಜಿ ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನ-ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣ ಮಟ್ಟಿನ ತೊಂದರೆ ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಶೀತ ಜ್ವರ, ಮೈ ಕೈ ಗಂಟು ನೋವು, ಕಣ್ಣು ನೋವು, ಮೊದಲಾದ ಆರೋಗ್ಯ ಸಂಬಂಧಿ ತೊಂದರೆ ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉತ್ತಮ ಕಾರ್ಯಕ್ಷಮತೆಯಿಂದ ತೊಡಗಿಸಿಕೊಂಡಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಆಹಾರದಲ್ಲಿ ವ್ಯತ್ಯಾಸ, ತಾಯಿಯ ಆರೋಗ್ಯದಲ್ಲಿ ತೊಂದರೆ, ಮೊದಲಾದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ ನಮಸ್ತೇ ಪುರುಷೋತ್ತಮ
ನಮಸ್ತೇ  ಸರ್ವಲೋಕಾತ್ಮನ್ ನಮಸ್ತೇ ತಿಗ್ಮಚಕ್ರಿಣೇ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *