ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ತ್ರಯೋದಶಿ ತಿಥಿ /
ಬುಧವಾರ/ಪೂರ್ವಾಭಾದ್ರ ನಕ್ಷತ್ರ/
ದಿನಾಂಕ: 03.04.2019
°~•~°~•~°~•~°~•~°~•~°
ಮೇಷ
ಉತ್ತಮ ಶ್ರದ್ಧೆಯಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಚರ್ಮ ಸಂಬಂಧಿ ತೊಂದರೆ ಅಲರ್ಜಿ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ, ಕೋಪವನ್ನು ಕಡಿಮೆಗೊಳಿಸಿ. ವಿದ್ಯಾರ್ಥಿಗಳು ಉತ್ತಮ ಮನಸ್ಸಿನಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಧರಣೀಗರ್ಭಸಂಭೂತಮ್ ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಮ್ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ವೃಷಭ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಗೊಳ್ಳುತ್ತದೆ. ಶೀತ ಜ್ವರ, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು
ಪರಿಹಾರ
ಶುಕ್ರ ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ ಶುಭ.
ಜಪಿಸಲು :
ಹಿಮಕುಂದ ಮೃಣಾಲಾಭಂ (ಸಮಾಭಾಸಂ) ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಮ್ | ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಮಿಥುನ
ವ್ಯವಹಾರಿಕ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ವ್ಯಾಪಾರಸ್ಥರಿಗೆ ನಷ್ಟವಾಗುವ ಪರಿಸ್ಥಿತಿ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇವೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಬುಧ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಪ್ರಿಯಂಗು-ಕಲಿಕಾಶ್ಯಾಮಮ್ ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಮ್ ಪ್ರಣಮಾಮ್ಯಹಮ್ || |
°~•~°~•~°~•~°~•~°~•~°
ಕರ್ಕಾಟಕ
ಉತ್ತಮ ಏಕಾಗ್ರತೆಯಿಂದ ಹಾಗೂ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಕಾರ್ಯಕ್ಷೇತ್ರದಲ್ಲಿ ಏಳಿಗೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನ ಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈ ಕೈ ಗಂಟು ನೋವು, ತಲೆನೋವು, ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು
ಜಪಿಸಲು :
ದಧಿಶಂಖತುಷಾರಾಭಮ್ ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ ಶಂಭೋರ್ಮುಕುಟಭೂಷಣಮ್ ||
°~•~°~•~°~•~°~•~°~•~°
ಸಿಂಹ
ತೊಡಗಿಸಿಕೊಂಡ ಕೆಲಸಗಳಲ್ಲಿ ವಿಘ್ನ ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುತ್ತದೆ ಹಾಗೂ ವಿನಾಕಾರಣ ಖರ್ಚು ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ರವಿ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಜಪಾಕುಸುಮ-ಸಂಕಾಶಂ ಕಾಶ್ಯಪೇಯಮ್ ಮಹಾದ್ಯುತಿಮ್ |
ತಮೋಽರೀಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ ||
°~•~°~•~°~•~°~•~°~•~°
ಕನ್ಯಾ
ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ವಂದೇ ವೃಂದಾವನಚರಮ್ ವಲ್ಲವೀಜನವಲ್ಲಭಮ್
ಜಯಂತೀ ಸಂಭವಂ ಧಾಮ ವೈಜಯಂತೀ ವಿಭೂಷಣಮ್ ||
°~•~°~•~°~•~°~•~°~•~°
ತುಲಾ
ಕೃಷಿಕರಿಗೆ ಹಾಗೂ ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ತೊಡಗಿಸಿಕೊಂಡ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು. ವಾಹನ ಪ್ರಯಾಣದಲ್ಲಿ ಜಾಗರೂಕತೆಯಿಂದ ಇರಬೇಕು ಹಾಗೂ ಮಕ್ಕಳು ಓಡಾಡುವಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ತಮ್ಮ ಆಲಸ್ಯತನ ದಿಂದಾಗಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ
ಜಪಿಸಲು :
ದೇವಾನಾಂ ಚ ಋಷೀಣಾಂ ಚ ಗುರುಮ್ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ||
°~•~°~•~°~•~°~•~°~•~°
ಮಕರ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಶ್ವಾಸ ಸಂಬಂಧಿ ತೊಂದರೆ, ಅಲರ್ಜಿ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.
ಜಪಿಸಲು :
ನೀಲಾಂಜನ-ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್||
°~•~°~•~°~•~°~•~°~•~°
ಕುಂಭ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಹಾಗೂ ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ ತಲೆನೋವು ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಶ್ರಮದಿಂದ ಮುಂದುವರಿಯಬೇಕು..
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಿರಿಯರಿಂದ ಸಹಾಯ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ನಮಸ್ತೇ ಪುಂಡರೀಕಾಕ್ಷ ನಮಸ್ತೇ ಪುರುಷೋತ್ತಮ
ನಮಸ್ತೇ ಸರ್ವಲೋಕಾತ್ಮನ್ ನಮಸ್ತೇ ತಿಗ್ಮಚಕ್ರಿಣೇ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}