ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ತ್ರಯೋದಶಿ ತಿಥಿ/
ಸೋಮವಾರ/ಶ್ರವಣ ನಕ್ಷತ್ರ /
ದಿನಾಂಕ 04.03..2019
°~•~°~•~°~•~°~•~°~•~°
ಮೇಷ
ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ತಮ್ಮ ಅಭಿವೃದ್ಧಿ ಸ್ಥಾನಮಾನ ಗೌರವ ದೊರೆಯುತ್ತದೆ, ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯ ಭಾಗ್ಯ ಹೊಂದುತ್ತೀರಿ. ವಿದ್ಯಾರ್ಥಿಗಳ ಉತ್ತಮ ಪರಿಶ್ರಮದಿಂದ ಅಭಿವೃದ್ಧಿಕಂಡುಬರುತ್ತದೆ ಹಾಗೂ ಕ್ರೀಡೆ, ನೃತ್ಯ, ಸಂಗೀತ ಕಲೆಗಳನ್ನು ಕಲಿಯಲು ಉತ್ತಮ ಅವಕಾಶ ಒದಗಿ ಬರುತ್ತದೆ.
ಪರಿಹಾರ:
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಽಸ್ತು ತೇ ||
°~•~°~•~°~•~°~•~°~•~°
ವೃಷಭ
ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದುಂದುವೆಚ್ಚ ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆ ಗೊಳ್ಳಲಿದೆ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಕಷ್ಟಪಟ್ಟು ಮುಂದುವರಿಯಬೇಕು
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ |
°~•~°~•~°~•~°~•~°~•~°
ಮಿಥುನ
ನಿಮ್ಮ ಪರಿಶ್ರಮಕ್ಕೆ ತಕ್ಕುದಾದ ಫಲ ದೊರೆಯದೆ ಇದ್ದರೂ ಕೂಡ ಶ್ರದ್ಧೆಯಿಂದ ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಬಂದಲ್ಲಿ ಉತ್ತಮವಾದ ಏಳಿಗೆ ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಅಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣ ಇರುವುದರಿಂದ ಜಾಗರೂಕತೆ ಯಾಗಿರಬೇಕುಯಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್|
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ವ್ಯಾವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||
°~•~°~•~°~•~°~•~°~•~°
ಸಿಂಹ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಪರಿಶ್ರಮದಿಂದ ವಿದ್ಯಾರ್ಥಿಗಳು ಮುಂದುವರಿಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕನ್ಯಾ
ಮಾಡುವಂತಹ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಹಾಗೂ ಕಷ್ಟನಷ್ಟಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದಂತಹ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ವ್ಯವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಶ್ರಮದಿಂದ ಮುಂದುವರಿಯಬೇಕು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಜಗಳಗಳು ಕಂಡುಬರುತ್ತದೆ. ರಕ್ತಕ್ಕೆ ಸಂಬಂಧಿಸಿದ ತೊಂದರೆಗಳು ಹಾಗೂ ಪಿತ್ತಕ್ಕೆ ಸಂಬಂಧಿಸಿದಂತಹ ತೊಂದರೆಗಳು ಬರುವಂತಹ ಲಕ್ಷಣಗಳಿರುವ ದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನೂತನ ಅಭಿವೃದ್ಧಿ ಉತ್ತಮ ಸ್ಥಾನಮಾನ ಗೌರವ ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ಉತ್ತಮ ದಾಂಪತ್ಯ ಜೀವನವನ್ನು ಅನುಭವಿಸುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕುಂಭ
ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡುಬರುವುದು ಹಾಗೂ ದುಂದು ವೆಚ್ಚವನ್ನು ಮಾಡಬಾರದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ವ್ಯವಹಾರ ಕ್ಷೇತ್ರಗಳಲ್ಲಿ ನಿಮ್ಮ ಆಲಸ್ಯತನ ದಿಂದಾಗಿ ಕೆಲವೊಂದು ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಕಂಡು ಬರುವುದು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಮನಸ್ಸಿನಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}