17.04.2019

ದಿನ ಭವಿಷ್ಯ

       

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ತ್ರಯೋದಶಿ ತಿಥಿ /

ಬುಧವಾರ/ಉತ್ತರ ನಕ್ಷತ್ರ/

ದಿನಾಂಕ: 17.04.2019

 °~•~°~•~°~•~°~•~°~•~°

ಮೇಷ

        ಉತ್ತಮ ಕಾರ್ಯಕ್ಷಮತೆ ಯಿಂದಾಗಿ ಮೇಲಿನ ಅಧಿಕಾರಿಗಳಿಂದ ಮೆಚ್ಚುಗೆ ಮಾತುಗಳು ಕೇಳಿ ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಆರ್ಥಿಕ ಬೆಳವಣಿಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಅಲರ್ಜಿ, ಚರ್ಮ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಕಿವಿ ನೋವು, ಜ್ವರ, ಕತ್ತು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ  ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಏಳಿಗೆ ದೊರೆಯುತ್ತದೆ




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ  ಅಭಿವೃದ್ಧಿ ದೊರೆಯುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಅವಕಾಶ ಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ನರಸಂಬಂಧಿ ತೊಂದರೆಗಳು. ರಕ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಕೋಪವನ್ನು ನಿಯಂತ್ರಣದಲ್ಲಿಡಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆಯನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು, ತಲೆನೋವು, ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ವ್ಯವಹಾರಿಕ ಕ್ಷೇತ್ರದಲ್ಲಿ ವಿಘ್ನಗಳು ಎದುರಾಗುತ್ತದೆ. ಹಣಕಾಸಿನ ವಿಚಾರಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಬರೆಯುತ್ತದೆ, ಉನ್ನತ ಹುದ್ದೆಯ ಸ್ಥಾನಮಾನಗಳು ದೊರೆಯುತ್ತದೆ, ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಉಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ  ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳು, ಮಾನಸಿಕವಾದ ತೊಂದರೆಗಳು ಎದುರಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಎದುರಾಗುತ್ತವೆ.  ಹಣಕಾಸಿನ ವಿಚಾರಗಳು ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಖರ್ಚುವೆಚ್ಚಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಸ್ಥಾನಮಾನಗಳು  ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿಕಂಡು ಬರುವುದು. ಗೃಹ ಉಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ನರಸಂಬಂಧಿ ತೊಂದರೆಗಳು, ರಕ್ತಕ್ಕೆ ಸಂಬಂಧಪಟ್ಟ ತೊಂದರೆಗಳು, ಬರುವ ಲಕ್ಷಣಗಳು ಇದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಮಕ್ಕಳ ಆಟೋಟಗಳ ಸಂದರ್ಭಗಳಲ್ಲಿ ಜಾಗ್ರತೆ ವಹಿಸಿ
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶ್ವಾಸ ಸಂಬಂಧಿಸಿ  ತೊಂದರೆಗಳು, ಅಲರ್ಜಿ ಗೆ ಸಂಬಂಧಿಸಿದ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ಉದ್ಯೋಗ ವ್ಯವಹಾರ ಕ್ಷೇತ್ರಗಳು  ಅಡೆತಡೆಗಳನ್ನುಎದುರಿಸಬೇಕಾಗುತ್ತದೆ.  ಭೂಮಿ ವ್ಯವಹಾರ ಮಾಡುವವರು ಜಾಗರೂಕತೆಯಿಂದ ವ್ಯವಹರಿಸಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಹದಗೆಡುವ ಲಕ್ಷಣ ಗಳಿರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮುನ್ನಡೆ.
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ನೂತನ ಉದ್ಯೋಗ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *