|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಶಿಕ್ಷಕರ ತರಬೇತಿ ಶಿಬಿರ

‎ಬದಿಯಡ್ಕ: ಶ್ರೀಭಾರತೀ ವಿದ್ಯಾಪೀಠದಲ್ಲಿ ಶಿಕ್ಷಕರಿಗಾಗಿ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಶ್ವಯುಜ ಕೃಷ್ಣ ತ್ರಯೋದಶಿಯಂದು (7-11-2026) ಹಮ್ಮಿಕೊಳ್ಳಲಾಯಿತು.

‎ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನ ಸಹಾಯಕ ಪ್ರಾಧ್ಯಾಪಕಿ, ಸಾಫ್ಟ್ ಸ್ಕಿಲ್ಸ್ ತರಬೇತುದಾರರು ಹಾಗೂ ಸಂಶೋಧನಾ ಮಾರ್ಗದರ್ಶಕಿ ಡಾ. ಪ್ರಣಮ್ಯ ಭಟ್ ಅವರು ಶಿಕ್ಷಕರಿಗೆ ತರಬೇತಿ ನೀಡಿದರು.

‎ತರಗತಿ ನಿರ್ವಹಣೆ, ಬೋಧನೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ, ಸಂವಹನ ಕೌಶಲಗಳು, ವೃತ್ತಿಪರ ಬೆಳವಣಿಗೆ ಹಾಗೂ ವೈಯಕ್ತಿಕ ವಿಕಸನದ ಕುರಿತು ವಿವಿಧ ಚಟುವಟಿಕೆಗಳ ಮೂಲಕ ಪರಿಣಾಮಕಾರಿಯಾಗಿ ತರಬೇತಿ ನೀಡಿದರು. ಶಿಕ್ಷಕರು ತಮ್ಮ ಬೋಧನಾ ಕೌಶಲಗಳನ್ನು ವೃದ್ಧಿಸಿಕೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಕಲಿಸಲು ಅಗತ್ಯವಾದ ಹಲವು ಉಪಯುಕ್ತ ವಿಚಾರಗಳನ್ನು ಹಂಚಿಕೊಂಡರು.
‎
‎ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮಧುಸೂದನ್ ಹಾಗೂ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತಡ್ಕ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಸಮಾರೋಪದ ವೇಳೆಯಲ್ಲಿ ಸಂಪನ್ಮೂಲ ವ್ಯಕ್ತಿಯ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.

‎ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು. ಈ ತರಬೇತಿ ಕಾರ್ಯಕ್ರಮವು ಶಿಕ್ಷಕರ ವೃತ್ತಿಪರ ಕೌಶಲಗಳ ಅಭಿವೃದ್ಧಿಗೆ ಉತ್ತಮ ಅವಕಾಶವಾಯಿತು.