|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

24.01.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ / ಚತುರ್ಥೀ ತಿಥಿ /

ಗುರುವಾರ / ಹುಬ್ಬಾ ನಕ್ಷತ್ರ /

ದಿನಾಂಕ:  24.01.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ  ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡರೂ ಕೂಡ ವಿನಾಕಾರಣ ಖರ್ಚು ವೆಚ್ಚಗಳು ಬರುತ್ತದೆ.  ಮನ ಸಂತೋಷ ತರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹ ಕಾಣುವುದು. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ  ಏಳಿಗೆ ಕಂಡು ಬರುತ್ತದೆ



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ತಮ್ಮ ಕೆಲಸ ಕಾರ್ಯದಲ್ಲಿ ಮುನ್ನಡೆ ಕಾಣುವುದು.  ಆರ್ಥಿಕವಾದ ಮುನ್ನಡೆ ಕಾಣುತ್ತದೆ.ಪ್ರವಾಸಗಳಿಂದ ಮನ ಸಂತೋಷ  ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಸುಖ ನೆಮ್ಮದಿ ಕಾಣುವುದು. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ  ಫಲ ಲಭ್ಯ




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ತಮ್ಮ ಕೆಲಸಗಾರರಲ್ಲಿ ಅಡಚಣೆ ಕಂಡುಬರುತ್ತದೆ.  ಆರ್ಥಿಕವಾಗಿ ನಿಧಾನಗತಿಯ ಮುನ್ನಡೆ ಕಂಡುಬಂದರೂ ಕೂಡ ಸಹೋದರರಿಂದ ಸಹಾಯ ಒದಗಿ ಬರುತ್ತದೆ.  ದಾಂಪತ್ಯ ಜೀವನದಲ್ಲಿ ನಿಧಾನಗತಿಯ ಮುನ್ನಡೆ ಕಾಣುತ್ತದೆ. ಪ್ರಯಾಣದಲ್ಲಿ ಅಡೆತಡೆಗಳು ಬರುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ ವಿದ್ಯಾರ್ಥಿಗಳಿಗೆ ಆಲಸಿ ತನವನ್ನು ಬಿಟ್ಟೂ ಮುಂದುವರೆದಲ್ಲಿ ಮಾತ್ರ ಶುಭ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ವ್ಯವಹಾರ ಕ್ಷೇತ್ರದಲ್ಲಿ  ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಕುಟುಂಬದಿಂದ ಹಣ ಒದಗಿ ಬರುತ್ತದೆ. ಆರ್ಥಿಕವಾಗಿ ಮುನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ  ಫಲಿತಾಂಶ ದೊರೆಯುತ್ತದೆ



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿದಾನಗತಿಯ ಮುನ್ನಡೆಗೆ ಕಂಡುಬರುತ್ತದೆ. ಮನಃಶಾಂತಿ ದೊರೆಯುತ್ತದೆ.  ಆರ್ಥಿಕವಾಗಿ ಚೇತರಿಕೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಏರ್ಪಡುತ್ತದೆ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಹಿನ್ನಡೆ ಕಂಡುಬಂದರೂ ಕೂಡ  ಹಿರಿಯರ ಸಹಾಯದಿಂದ ಶುಭವಾಗಲಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ಕ್ಷೇತ್ರದಲ್ಲಿ ಮಂದಗತಿಯ ಹಿನ್ನಡೆ ಕಾಣುತ್ತೀರಿ.  ಆರ್ಥಿಕವಾಗಿ ನಿಧಾನಗತಿಯ ಮುನ್ನಡೆ ಕಂಡುಬಂದರೂ ಕೂಡ ಮನಃ ಶಾಂತಿಯನ್ನು ಕಳೆದುಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ಕಲಹ ಕಂಡುಬರುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಇತರರ ಸಹಕಾರದಿಂದ ಏಳಿಗೆ ದೊರೆಯುತ್ತದೆ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾದ ಬೆಳವಣಿಗೆ ಕಂಡು ಬರುತ್ತದೆ. ಆರ್ಥಿಕವಾಗಿ ಮುನ್ನಡೆ ಕಂಡುಬರುತ್ತದೆ ನಿಮಗೆ ಸಿಗಬೇಕಾದ ಅಂತ ಹಣವು ಸಿಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಚೇತರಿಕೆ. ದೂರದ ಬಂಧುಗಳ ಆಗಮನ. ವಿದ್ಯಾರ್ಥಿಗಳಿಗೆ ಉತ್ತಮವಾದ ಮುನ್ನಡೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ  ಉತ್ತಮವಾದಏಳಿಗೆ ಕಂಡು ಬರುತ್ತದೆ. ನೂತನ  ಉದ್ಯೋಗಆಕಾಂಕ್ಷಿಗಳಿಗೆ ಹೊಸ ಉದ್ಯೋಗ ದೊರೆಯುವುದು. ಆರ್ಥಿಕವಾಗಿ  ತೊಂದರೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಕಾಣುವಿರಿ. ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ ಶುಭವಾಗಲಿದೆ



ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಮಂದಗತಿಯ ಹಿನ್ನಡೆ ಕಂಡುಬರುತ್ತದೆ ನಿಮ್ಮ ಆಲಸ್ಯತನ ದಿಂದ ಅವಕಾಶವನ್ನು ಕಳೆದುಕೊಳ್ಳುತ್ತೀರಿ. ಆರ್ಥಿಕವಾಗಿ  ಹಿರಿಯರಿಂದ ಅನುಕೂಲತೆಗಳು ಒದಗಿ ಬರುತ್ತದೆ. ದಾಂಪತ್ಯದಲ್ಲಿ ಮುನಿಸು ಕಂಡುಬರುತ್ತದೆ. ಆರೋಗ್ಯದಲ್ಲಿ ಹಿನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ  ಏಳಿಗೆ ಇದೆ


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ.  ಆರ್ಥಿಕವಾಗಿ ತೊಂದರೆಯನ್ನು ಎದುರಿಸಬೇಕಾದೀತು. ಮನಶ್ಯಾಂತಿಯನ್ನು ಕಳೆದುಕೊಳ್ಳುತ್ತೀರಿ. ದಾಂಪತ್ಯ ಜೀವನದಲ್ಲಿ  ಕಲಹ. ಆರೋಗ್ಯದಲ್ಲಿ ಶೀತ ಜ್ವರ ಮೊದಲಾದ ತೊಂದರೆಗಳು ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ.  ಹಣಕಾಸಿನ ವಿಚಾರದಲ್ಲಿ ತೊಡಕುಗಳು ಕಂಡುಬರುತ್ತದೆ. ಬರ ಬೇಕಾದಂತಹ ಹಣಗಳು ಬರುವುದಿಲ್ಲ. ದಾಂಪತ್ಯ ಜೀವನದಲ್ಲಿ ಸುಖ ಕಾಣುವಿರಿ ಆರೋಗ್ಯದಲ್ಲಿ ಮಂದಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಸಿನಿಂದ ಶ್ರದ್ಧೆಯಿಟ್ಟು ಮುಂದುವರೆದಲ್ಲಿ ಶುಭ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯಾವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ ಕಾಣುವುದು.  ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ ಶುಭ. ಆರ್ಥಿಕವಾಗಿ ಮುನ್ನಡೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ  ಫಲ ಲಭ್ಯ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}