|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

12.02.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ಸಪ್ತಮೀ ತಿಥಿ/

ಮಂಗಳವಾರ / ಭರಣಿ ನಕ್ಷತ್ರ /

ದಿನಾಂಕ12.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳ ಸಂಭವಿಸುವ ಲಕ್ಷಣ ಇರುವುದರಿಂದ ಮಾತಿನ ಮೇಲೆ ಗಮನವಿರಲಿ. ಶೀತ, ಜ್ವರ, ತಲೆನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮುಂದುವರಿಯಬೇಕು. ಗುರುಹಿರಿಯರನ್ನು ಗೌರವಿಸಿ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಮಾಡುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಹಿರಿಯರಿಂದ ಸಹಾಯ ಒದಗಿಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಶೀತ, ಜ್ವರ, ತಲೆನೋವು, ಮೂತ್ರ ಸಂಬಂಧಿ ಸಮಸ್ಯೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಏಳಿಗೆ ದೊರೆಯುತ್ತದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ತೊಂದರೆಗಳು ಕಂಡುಬರುತ್ತದೆ. ಸಂಪಾದಿಸಿದ ಹಣವನ್ನು  ಉತ್ತಮಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಎದುರಾಗಬಹುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಮೈ ಕೈ ಗಂಟು ನೋವುಗಳು, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು. ಗುರುಹಿರಿಯರ ಮಾರ್ಗದರ್ಶನದಂತೆ ಮುಂದುವರಿಯಿರಿ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರಲಿದೆ. ಆರ್ಥಿಕ ಮುನ್ನಡೆ  ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಪೇಕ್ಷಿಸಿದ ಅಂಕ ಬಾರದಿರುವುದರಿಂದ ಅಸಮಾಧಾನಕ್ಕೆ ಒಳಗಾಗಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಸಾಲ ಮಾಡಬೇಕಾದಪರಿಸ್ಥಿತಿ ಒದಗಿಬಂದೀತು.  ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಮೈ ಕೈ ನೋವು, ಮಾನಸಿಕ ಖಿನ್ನತೆ ಮುಂತಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿನಾಕಾರಣ ಖರ್ಚು ಮಾಡುವಿರಿ. ಆರೋಗ್ಯದಲ್ಲಿ ನಿಧಾನಗತಿಯ ಸುಧಾರಣೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ.  ನೂತನ ಉದ್ಯೋಗಾಕಾಂಕ್ಷಿಗಳಿಗೆ ನೂತನ ಉದ್ಯೋಗ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಉತ್ತಮ ಮುನ್ನಡೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಅಭಿವೃದ್ಧಿ ಕಂಡುಬರಲಿದ್ದು ಹಿರಿಯರ ಪ್ರಶಂಸೆಗೆ ಒಳಗಾಗುತ್ತೀರಿ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ವ್ಯವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗಾಗಿ ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಜಗಳ ಉಂಟಾಗುವ ಸಾಧ್ಯತೆಗಳಿದ್ದು ಜಾಗ್ರತೆಯಿಂದಿರಿ. ಶೀತ, ಜ್ವರ, ಮಾನಸಿಕ ಖಿನ್ನತೆ ಮುಂತಾದ ತೊಂದರೆಗಳು ಬರುವ ಲಕ್ಷಣ ಇದೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಏಕಾಗ್ರಚಿತ್ತದಿಂದ ವಿದ್ಯಾಭ್ಯಾಸದಲ್ಲಿ ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯಜೀವನದಲ್ಲಿ ಮಾತಿನ ಮೂಲಕ ಜಗಳಗಳ ಬರುವ ಸಾಧ್ಯತೆಗಳಿದ್ದು ಜಾಗರೂಕತೆಯಿಂದ ಇರಿ ಹಾಗೂ ನಿಮ್ಮ ಕೋಪವನ್ನು ನಿಯಂತ್ರಿಸಿ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು, ಗುರುಹಿರಿಯರ  ಮಾರ್ಗದರ್ಶನದಂತೆ ಮುಂದುವರಿಯಿರಿ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿಯೂ  ಅಡೆತಡೆ ಕಂಡುಬರುತ್ತದೆ. ಆರೋಗ್ಯದಲ್ಲಿ ಸುಧಾರಣೆಗಳು ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉದಾಸೀನತೆ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ  ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಸಣ್ಣಪುಟ್ಟ ತೊಂದರೆಗಳು ಕಂಡುಬರುವುದು. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಜಗಳಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು‌.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ ಕ್ಷೇತ್ರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಉತ್ತಮ  ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತದೆ. ಗುರುಹಿರಿಯರ ಮಾರ್ಗದರ್ಶನದಂತೆ ಮುಂದುವರೆಯಿರಿ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}