|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

31.05.2019

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಕೃಷ್ಣಪಕ್ಷ/ದ್ವಾದಶಿ ತಿಥಿ/

ಶುಕ್ರವಾರ/ಅಶ್ವಿನೀ ನಕ್ಷತ್ರ /



ದಿನಾಂಕ: 31..05.2019

 °~•~°~•~°~•~°~•~°~•~°

ಮೇಷ
ಕೆಲಸ ಕಾರ್ಯದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ.  ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶ ದೊರೆಯುತ್ತದೆ. ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿಬರಲಿದೆ.  ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿಯ ಮುನ್ನಡೆ ಕಂಡುಬರುವುದು.

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ಆಹಾರದ ಮೂಲಕವಾಗಿ ಆರೋಗ್ಯದ  ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುನ್ನಡೆಯಬೇಕು.

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರಲಿದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು. ವಿದ್ಯಾರ್ಥಿಗಳು ಉತ್ತಮ ಅಭಿವೃದ್ಧಿಯನ್ನು ಸಾಧಿಸಲಿದ್ದಾರೆ.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ವ್ಯವಹಾರದಲ್ಲಿ ಉತ್ತಮ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುತ್ತದೆ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳಿಗೆ ನಿಧಾನಗತಿಯ ಏಳಿಗೆ ದೊರೆಯುತ್ತದೆ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನಿಮ್ಮ  ಶ್ರದ್ಧೆ ಹಾಗೂ ಉತ್ತಮ ಪರಿಶ್ರಮದಿಂದಾಗಿ ಮೇಲುಗೈಯನ್ನು ಸಾಧಿಸುವಿರಿ. ಹಣಕಾಸು ವಿಚಾರದಲ್ಲಿ  ಉತ್ತಮ ಅಭಿವೃದ್ಧಿ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ಕಂಡುಬರುತ್ತದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಖರ್ಚುವೆಚ್ಚವನ್ನು ಜಾಗರೂಕತೆಯಿಂದ ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವುದು. ಆರೋಗ್ಯದ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡು ಬರುವುದು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ನೂತನ ವ್ಯವಹಾರಸ್ಥರಿಗೆ ಉತ್ತಮ ಏಳಿಗೆ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧಿ ಸಣ್ಣ  ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿ  ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು  ನಿಭಾಯಿಸಿ. ಶೀತ ಜ್ವರ ತಲೆನೋವು ಕಣ್ಣು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸಿತನ ಬಿಟ್ಟು  ಮುನ್ನಡೆದರೆ ಮಾತ್ರ ಅಭಿವೃದ್ಧಿ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಮಾಡುವಂತಹ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ  ಕಣ್ಣು ಬರುವುದು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯುತ್ತದೆ.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ಉದ್ಯೋಗ ವ್ಯವಹಾರದಲ್ಲಿ ನೂತನ ಬದಲಾವಣೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ  ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ.   
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಏಳಿಗೆ ಕಂಡುಬರುವುದು. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುವುದು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ಕೆಲಸಗಾರರಲ್ಲಿ ಉತ್ತಮ ಅಭಿವೃದ್ಧಿ,  ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}