ಸ್ವಭಾಷಾ ಚಾತುರ್ಮಾಸ್ಯಕ್ಕೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭೇಟಿ

ಸುದ್ದಿ

ಗೋಕರ್ಣ: ಅಶೋಕೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಸ್ವಭಾಷಾ ಚಾತುರ್ಮಾಸ್ಯ ವ್ರತದ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭೇಟಿ ನೀಡಿ, ಶ್ರೀಸಂಸ್ಥಾನದವರ ದರ್ಶನಾಶೀರ್ವಾದ ಪಡೆದರು.

ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಮಾತನಾಡಿ ಸ್ವಭಾಷಾ ಚಾತುರ್ಮಾಸ್ಯ ಪರಿಕಲ್ಪನೆಯ ಸುಂದರವಾಗಿದೆ. ಶ್ರೀಸಂಸ್ಥಾನದವರ ಪ್ರತಿಯೊಂದು ಯೋಚನೆಯಲ್ಲೂ ವಿಭಿನ್ನತೆಯಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಇದು ಈಗಿನ ಅವಶ್ಯಕತೆಯಾಗಿದೆ ಎಂದು ತಿಳಿಸಿದರು.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜಿ.ಎಲ್, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಉಪಾಧ್ಯಕ್ಷ ಶಾಂತಾರಾಮ ಹಿರೇಮನೆ, ವಿವಿವಿ ಆಡಳಿತಾಧಿಕಾರಿ ಟಿ.ಜೆ. ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *