ಈಜು ಸ್ಪರ್ಧೆಯಲ್ಲಿ ೩ ಚಿನ್ನ ಗಳಿಸಿದ ಅಮನ್ ಕೆ. ದೇವಾಡಿಗ

ವಿದ್ಯಾಲಯ

ಮಂಗಳೂರು: ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ೧೪ರ ವಯೋಮಾನ ವಿಭಾಗದ ೫೦ ಮೀ., ೧೦೦ ಮೀ. ಮತ್ತು ೨೦೦ ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ೩ ಚಿನ್ನದ ಪದಕಗಳನ್ನು ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ. ಅಲ್ಲದೆ ೩ ಸ್ಪರ್ಧೆಗಳಲ್ಲಿಯೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಲು ದ.ಕ. ಜಿಲ್ಲಾ ಮಟ್ಟದ ರಿಲೇ ತಂಡವನ್ನು ಪ್ರತಿನಿಧಿಸಲಿದ್ದಾರೆ.

Leave a Reply

Your email address will not be published. Required fields are marked *