ಸ್ವಾಗತ ಭಾರತೀ

ಸುದ್ದಿ

ಮುಜುಂಗಾವು: ಅಧಿಕ ಜ್ಯೇಷ್ಠ ಕೃಷ್ಣ ಪಾಡ್ಯದಂದು (01-06-2026) ಶ್ರೀಭಾರತೀ ವಿದ್ಯಾಪೀಠದಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷರಾದ ಪದ್ಮರಾಜ ಪಟ್ಟಾಜೆಯವರು ಆಗಮಿಸಿ ‘ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣ ಇಂದಿನ ಆವಶ್ಯಕತೆಗಳಲ್ಲಿ ಒಂದು. ವಿದ್ಯಾಪೀಠ ಇಂತಹ ಶಿಕ್ಷಣ ನೀಡುವುದರಲ್ಲಿ ಮುಂದಿದೆ. ವಿದ್ಯಾರ್ಥಿಗಳು ಈ ಶಿಕ್ಷಣ ಪದ್ಧತಿಯನ್ನು ಪಡೆದು ವಿಕಸಿತ ಭಾರತದ ಕಲ್ಪನೆಯನ್ನು ಸಾಕರಗೊಳಿಸುವಂತಾಗಲಿ’ ಎಂದು ತಮ್ಮ ಮಾತಿನಿಂದ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಾಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಉದಯಕುಮಾರ್ ಮಾಯಿಪ್ಪಾಡಿ, ಆಡಳಿತ ಸಮಿತಿಯ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಎಡನಾಡು-ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ಯಾಮ ರಾಜ್ ದೊಡ್ಡಮಾಣಿ, ಮಾತೃ ಸಮಿತಿಯ ಅಧ್ಯಕ್ಷೆ ದೀಪಾ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಭೆರ್ಮರ್ಗ, ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಡನಾಡು -ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

Leave a Reply

Your email address will not be published. Required fields are marked *