ಮುಜುಂಗಾವು: ಶ್ರೀಭಾರತೀ ವಿದ್ಯಾಪೀಠದಲ್ಲಿ ನಿಜ ಜ್ಯೇಷ್ಠ ಕೃಷ್ಣ ಪಾಡ್ಯದಂದು (30-06-2026) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಅಂತರ್ಜಾಲ ಮೂಲಕ ನಡೆದ ಕಾರ್ಯಕ್ರಮದ ದ್ವಾರಾ ಆಚರಿಸಲಾಯಿತು.


ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮಂಜುನಾಥಸ್ವಾಮಿ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ಅಮ್ಮನವರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನವನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಬೆಂಗಳೂರಿನ ಸ್ಪೆಷಲ್ ಪೊಲೀಸ್ ಆಫೀಸರ್ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು. ‘ಒಬ್ಬ ವಿದ್ಯಾರ್ಥಿಯು ಮಾದಕ ವಸ್ತುವಿನ ವ್ಯಸನಿಯಾದರೆ ಅವನಿಂದ ನಾಶವಾಗುವುದು ಇಡೀ ಕುಟುಂಬ ಹಾಗೂ ಸಮಾಜ’ ಎಂದು ಡಾ. ವೆಂಕಟೇಶ್ ಪ್ರಸಾದರವರು ಹೇಳಿದರೆ , ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಮಕ್ಕಳಿಗೆ ಮಾದಕ ವಸ್ತು ಸೇವನೆಯಿಂದಾಗಿ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಿಸಿದರು.
ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಗಳಾದ ಶಶಿಕಲಾ ಸುವರ್ಣ, ಜನಜಾಗೃತಿ ವೇದಿಕೆಯ ಕುಂಬಳೆ ವಲಯದ ಅಧ್ಯಕ್ಷ ಮೇಲ್ವಿಚಾರಕ ಅಭಿಷೇಕ್, ಸೇವಾಪ್ರತಿನಿಧಿ ಸ್ವರ್ಣಲತಾ, ಶಾಲಾ ಮುಖ್ಯೋಪಾಧ್ಯಾಯ ಶಾಂಭಟ್ ದರ್ಬೆ ಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು.