|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸ್ವಾತಂತ್ರ್ಯೋತ್ಸವ

ಬೆಂಗಳೂರು: ವಿಜಯನಗರದ ಶ್ರೀಭಾರತೀ ವಿದ್ಯಾಲಯದಲ್ಲಿ 15-08-2026 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಯ ಅಧ್ಯಕ್ಷರಾದ ಡಾ. ಶಾರದಾ ಜಯಗೋವಿಂದ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ನಾಗವೇಣಿ ಭಾಗವತ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಶಾಲೆಯ ಉಪಾಧ್ಯಕ್ಷರಾದ ಪಿ. ಜೆ. ಭಟ್, ಖಜಾಂಚಿಗಳಾದ ಸಿ. ಎಸ್. ಶ್ರೀಪಾದ ಭಟ್ ಸಾರಂಗ್, ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಪ್ರಭಾಕರ್ ಅಲಗೋಡು, ಶಿವರಂಜನ್ ಬೇರ್ಕಡವು ಮತ್ತು ಶಿವರಾಜ್ ಪೆರ್ಮುಖ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲೆಯ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ, ಉದಾರ ಸಹಾಯ ಹಾಗೂ ನಿರಂತರ ಸಹಕಾರ ನೀಡುತ್ತಿರುವ ದಾನಿಗಳನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮತ್ತೊಂದು ಪ್ರಮುಖ ಘಟ್ಟವಾಗಿ, 2025–26ನೇ ಸಾಲಿನ 10ನೇ ತರಗತಿಯ ಉತ್ತೀರ್ಣ ವಿದ್ಯಾರ್ಥಿಗಳಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ನಗದು ಬಹುಮಾನಗಳನ್ನು ವಿತರಿಸಲಾಯಿತು. ಒಟ್ಟು ₹40,000ಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಿ, ಅವರ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು.

ಶಾಲೆಯ ಶೈಕ್ಷಣಿಕ ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿರುವಂತೆ, ನಮ್ಮ ಶಾಲೆಯ ಮೂವರು ವಿದ್ಯಾರ್ಥಿಗಳು ಐ.ಸಿ.ಎಸ್.ಇ. ಮೆರಿಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ವಿಷಯಗಳಲ್ಲಿ ಅತ್ಯುತ್ತಮ ಹಾಗೂ ಅಸಾಧಾರಣ ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಐ.ಸಿ.ಎಸ್.ಇ ಮಂಡಳಿಯು ನೀಡುವ ಈ ಪ್ರತಿಷ್ಠಿತ ಮೆರಿಟ್ ಪ್ರಶಸ್ತಿಯನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳಾದ ಪ್ರಣವ್ ಕುಲಕರ್ಣಿ, ಮನ್ವಿತ್ ಸಂತೋಷ್ ಹಾಗೂ ಅರ್ಪಿತ್ ಕೆ. ಅವರು ಪಡೆದಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು. ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಮಾಲೂರಿನ ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಸ್ವಾತಂತ್ರ್ಯೋತ್ಸವದಂದು ದ್ವಜಾರೋಹಣ ನಡೆಸಲಾಯಿತು.