ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ

ವಿದ್ಯಾಲಯ ಸುದ್ದಿ

 

ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. ಮಾತೆಯರು, ಮಹನೀಯರು ತಯಾರಿಸಿದ ಅತ್ಯುತ್ತಮ ಆಹಾರವನ್ನು ಆರೋಗ್ಯಪೂರ್ಣ ಜೀವನಕ್ಕಾಗಿ ಪಡೆದುಕೊಳ್ಳಬಹುದಾಗಿದೆ.

ಮೇಳದಲ್ಲಿ ಹಲಸು, ಮಾವು, ಬಾಳೆಯವಿವಿಧ ರೀತಿಯ ತಿಂಡಿಗಳು ಸಿಗಲಿವೆ. ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ ಬೀಜ ಪಾಯಸ, ಹಲಸಿನ ಕಾಯಿ ದೋಸೆ/ಶುಂಠಿ ಚಟ್ನಿ, ಹಲಸಿನ ಹಣ್ಣಿನ ದೋಸೆ, ಸೊಳೆ ರೊಟ್ಟಿ, ಗುಜ್ಜೆ ಮಂಚೂರಿ, ಹಲಸಿನ ಬೀಜದ ಚಟ್ಟಂಬಡೆ, ಹಲಸಿನ ಕಾಯಿ ಸೋಂಟೆ, ಹಲಸಿನ ಕಾಯಿ ಬೋಂಡ, ಬಾಳೆಕಾಯಿ ಚಿಪ್ಸ್, ಹಲಸಿನ ಕಾಯಿ ಹಪ್ಪಳ, ಹಲಸಿನ ಹಣ್ಣಿನ ಹಪ್ಪಳ, ಬಾಳೆಹಣ್ಣಿನ  ಹಲ್ವ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಅದ್ದಿಹಿಟ್ಟು, ಮಾವಿನ ಹಣ್ಣಿನ ಮಾಂಬಳ, ಹಲಸಿನ ಹಣ್ಣಿನ ಸೊಳೆ, ಹಲಸಿನ ಕಾಯಿ ಸೊಳೆ, ಗುಜ್ಜೆ ಪಲಾವ್, ಹಲಸಿನ ಹಣ್ಣು ಕೊಟ್ಟಿಗೆ, ಹಲಸಿನ ಹಣ್ಣು ಗೆಣಸಲೆ, ಹಲಸಿನ ಹಣ್ಣು ಇಡ್ಲಿ, ಬಾಳೆಕಾಯಿ ದೋಸೆ, ಹಲಸಿನ ಕಾಯಿ ಪೋಡಿ, ಹಲಸಿನಕಾಯಿ ಅಂಬೊಡೆ, ಹಲಸಿನ ಹಣ್ಣಿನ ಬನ್ಸ್, ಹಲಸಿನ ಬೀಜ ಹೋಳಿಗೆ, ಹಲಸಿನ ಹಣ್ಣಿನ ಗುಳಿಅಪ್ಪ, ಚಕ್ಕುಲಿ, ಬಾಳೆದಂಡಿನ ಸೂಪ್ ಹಲಸಿನ ಬೀಜದ ಸೂಪ್, ಹಲಸಿನಕಾಯಿ ಕಟ್ಲೆಟ್, ಅತಿರಸ, ಸಕ್ಕರೆ ಬೆರಟಿ, ಮಾವಿನ ಹಣ್ಣಿನ ರಸಾಯನ, ಕಾಫಿ, ಟೀ, ಕಷಾಯ, ಬಿಸ್ಕೆಟ್ ರೊಟ್ಟಿ, ಮಾವಿನಹಣ್ಣಿನ ಜ್ಯೂಸ್, ಮಸಾಲೆ ಮಜ್ಜಿಗೆ ನೀರು ಪಡೆಯಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author Details


Srimukha

Leave a Reply

Your email address will not be published. Required fields are marked *