ಶಿವಪದ ವೇದಿಕೆಯಿಂದ ಎಸ್. ಪಿ. ಬಿ. ನಿಧನಕ್ಕೆ ಸಂತಾಪ

ದೇವಾಲಯ

ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದ ಶಿವಪದ ವೇದಿಕೆಯ ಪರವಾಗಿ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಸಂಸ್ಥಾನ ಮಹಾಬಲೇಶ್ವರ ದೇವಾಲಯದಲ್ಲಿ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಮಾಡಿಕೊಡುತ್ತಿರುವ “ಶಿವಪದ” ವೇದಿಕೆಯಲ್ಲಿ ಬಂದು ಹಾಡಲು ತಮ್ಮ ಅಪೇಕ್ಷೆಯನ್ನು ವ್ಯಕ್ತಪಡಿಸಿದ್ದರು. ಗಾನಲೋಕದ ಮಹಾಮೇರುವಾಗಿದ್ದ ಗಾನಗಂಧರ್ವ ಎಸ್. ಪಿ. ಬಾಲಸುಬ್ರಹ್ಮಣ್ಯಂ” ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರಿ ಜಗದೀಶ್ವರನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇದರಲ್ಲಿ ಶಿವಪದ ವೇದಿಕೆಯ ಸಂಘಟಕರಾದ ಡಾ. ಶೀಲಾ ಹೊಸ್ಮನೆ, ಮಹೇಶ ಶೆಟ್ಟಿ, ರಮೇಶ ಪಂಡಿತ್, ವೇ. ಮಹಾಬಲೇಶ್ವರ ಉಪಾಧ್ಯಾಯ, ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಜಿ. ಕೆ. ಹೆಗಡೆ ಉಪಸ್ಥಿತರಿದ್ದರು.

Author Details


Srimukha

Leave a Reply

Your email address will not be published. Required fields are marked *