ಕೈರಂಗಳ ಪುಣ್ಯಕೋಟಿನಗರ ಅಮೃತಧಾರಾ ಗೋಶಾಲೆ ಸೇವಾ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಭಟ್ ರವರು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿ ಕೊರೋನಾ ಕರ್ಫ್ಯೂನಿಂದಾಗಿ ಹಸುಗಳ ಮೇವಿನ ಸಮಸ್ಯೆ ಬಂದಿರುವ ವಿಷಯವನ್ನು ಮಾನ್ಯ ಸಚಿವರಿಗೆ ಮನವರಿಕೆ ಮಾಡಿ ಅನುದಾನ ಮಂಜೂರು ಮಾಡಬೇಕೆಂದು ವಿನಂತಿಸಿದರು.
ಸಮಸ್ಯೆಯನ್ನು ಆಲಿಸಿದ ಸಚಿವರು ಮುಂದೆ ಈ ಬಗ್ಗೆ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸತೀಶ್ ಕುಂಪಲ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ವಿನಯ ಎಲ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡರಾದ ಪ್ರವೀಣ ಆಳ್ವ ಮುಡಿಪು ಉಪಸ್ಥಿತರಿದ್ದರು.