ಭಾರತೀಯರ ಬಲಿದಾನವನ್ನು ಮರೆಯದೆ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು : ಶ್ರೀಕೃಷ್ಣ ಶರ್ಮ ಹಳೆಮನೆ

ಸುದ್ದಿ

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು.

 

ಮಂಗಳೂರು ಹವ್ಯಕ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಹಳೆಮನೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಭಾರತೀಯರನ್ನು ಮರೆಯದೆ ನಾವು ಸ್ವಾರ್ಥವನ್ನು ಬಿಟ್ಟು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು, ಅಖಂಡ ಭಾರತದ ಏಕತೆಗೆ ನಾವು ಕೈಜೋಡಿಸಬೇಕು ಎಂದರು.

 

ಮುಖ್ಯ ಅತಿಥಿಗಳಾಗಿ ಕೆನರಾ ಮೆಷಿನ್ ಸ್ಟೋರ್ಸ್ನ ಪಾಲುದಾರರಾದ ಎನ್. ಸುಬ್ರಹ್ಮಣ್ಯ ಭಟ್ ಅವರು ಭಾಗವಹಿಸಿ, ಎಲ್ಲರಿಗೂ ಸಿಹಿ ಹಂಚಿ ಶುಭಹಾರೈಸಿದರು.

 

ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಭಟ್ ಹಾಗೂ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಗಂಗಾರತ್ನ ಮುಗುಳಿ ಉಪಸ್ಥಿತರಿದ್ದರು.

 

ಅನಂತರ ಪ್ರಾಥಮಿಕ, ಪ್ರೌಢ ಹಾಗೂ ಪ.ಪೂ. ವಿಭಾಗಗಳ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

 

ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್‌ದಾಸ್ ಸ್ವಾಗತಿಸಿ, ಎಸ್.ಎಸ್.ಎಸ್. ವಿದ್ಯಾಲಯದ ಮುಖ್ಯೋಪಾಧ್ಯಾಯ ಗುರುರಾಜ್ ಭಟ್ ವಂದಿಸಿದರು. ಪ.ಪೂ. ಕಾಲೇಜಿನ ಉಪನ್ಯಾಸಕ ಅನಂತನಾರಾಯಣ ಪದಕಣ್ಣಾಯ ನಿರೂಪಿಸಿದರು.

Author Details


Srimukha

Leave a Reply

Your email address will not be published. Required fields are marked *