ಬೆಂಗಳೂರು: ಹಂಪಿನಗರದಲ್ಲಿರುವ ಶ್ರೀಭಾರತೀ ವಿದ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಶಾಲೆಯ ಅಧ್ಯಕ್ಷರಾದ ಗೋಪಾಲಕೃಷ್ಣ ಹೆಗಡೆ ಧ್ವಜಾರೋಹಣ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ಕವಾಯತ್ತು ಪ್ರದರ್ಶನ, ಪಿರಾಮಿಡ್ ಪ್ರದರ್ಶನ, ನೃತ್ಯ, ದೇಶಭಕ್ತಿ ಗೀತೆ ಗಾಯನ, ಭಾಷಣ ಇವೇ ಮೊದಲಾದ ಮನರಂಜನಾ ಕಾರ್ಯಕ್ರಮಗಳು ನಡೆದವು. 2018-19ನೇ ಸಾಲಿನ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಇಸ್ರೋದ ಹಿರಿಯ ವಿಜ್ಞಾನಿಗಳಾದ ಪಿ.ಜೆ.ಭಟ್ಟ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಶಾಲೆಯ ಆಡಳಿತ ಸಮಿತಿಯ ಸದಸ್ಯರಾದ ಡಾ. ಶಾರದಾ ಜಯಗೋವಿಂದ, ಗೋವಿಂದರಾಜ್ ಕೋರಿಕ್ಕಾರ ಉಪಸ್ಥಿತರಿದ್ದರು.