ಶ್ರೀಭಾರತೀ ವಿದ್ಯಾಲಯದಲ್ಲಿ ಮಾತಾ ಪಿತೃಪೂಜೆ
ಹಂಪಿನಗರ: ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆಯಾದ ಶ್ರೀಭಾರತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೂರಾರು ವಿದ್ಯಾರ್ಥಿಗಳು ತಮ್ಮ ಜನ್ಮದಾತರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಕಣ್ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿಯನ್ನು ನೆನಪಿಸುವ ಉದ್ದೇಶದಿಂದ ಪರಮಪೂಜ್ಯ ಶ್ರೀಮಜ್ಜಗದ್ಗುಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಗತ್ಪಾಲಕರಾದ ಪಾರ್ವತಿ ಪರಮೇಶ್ವರರಿಗೆ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ತಾವು ಪಾಲಕರನ್ನು ನೋಡಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂಸ್ಕಾರದ ಬೆಳಕಿನಲ್ಲಿ ಸಾಧನೆಯ ಹೆಜ್ಜೆಯನ್ನಿಡುವಂತೆ ಸಹಕರಿಸುವ ತಾಯಿ ತಂದೆಯರನ್ನು ಬದುಕಿಡೀ ಸಲಹುವ ಶಪಥವನ್ನು […]
Continue Reading