ತೇಜೋವಧೆ ಮಾಡುತ್ತಿದ್ದವರಿಗೆ ನ್ಯಾಯಾಲಯ ಮಾಡಿದ್ದೇನು !
ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಹಾಗೂ ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳ ಕುರಿತು ಆಧಾರರಹಿತವಾದ ವದಂತಿಗಳನ್ನು ಹಬ್ಬಿಸಿ, ತೇಜೋವಧೆ ಮಾಡುವ ಹಾಗೂ ಸಮಾಜದ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸುವ ಪ್ರಯತ್ನಗಳನ್ನು ಪ್ರತಿಬಂಧಿಸಿ ಹೊಳೆನರಸಿಪುರ ಸಿವಿಲ್ ಜಡ್ಜ್ ಮತ್ತು ಜೆ. ಎಂ. ಎಫ್. ಸಿ. ನ್ಯಾಯಾಲಯ ಆದೇಶ ನೀಡಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀರಾಮಚಂದ್ರಾಪುರಮಠ ಹಾಗೂ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಸಮಾಜದಲ್ಲಿ ಧಾರ್ಮಿಕತೆಯನ್ನು ಬೆಳೆಸುವ ಜೊತೆಗೆ ಸರ್ವಸಮಾಜದ ಉನ್ನತಿಗೆ ಶ್ರಮಿಸುತ್ತಿದ್ದಾರೆ. ಮಠದ ವ್ಯವಹಾರಗಳನ್ನು ಪಾರದರ್ಶಕವಾಗಿ ಇಟ್ಟಿರುವ ಜೊತೆಗೆ ಸುವ್ಯವಸ್ಥಿತ ಆಡಳಿತವನ್ನು ನೀಡಿದ್ದಾರೆ. […]
Continue Reading