ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” […]

Continue Reading

ರಾಮಚಂದ್ರಾಪುರ ಮಠದಿಂದ ಗೋಮಯ ಕಾಗದ ಲೋಕಾರ್ಪಣೆ

  ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವಶ್ವರಭಾರತೀ ಮಹಾಸ್ವಾಮೀಜಿ ಸೋಮವಾರ ನೆರವೇರಿಸಿದರು. ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷóಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ […]

Continue Reading

ತಾಳ್ಮೆಗೆ ತಪಸ್ಸಿನ ಫಲವಿದೆ: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು […]

Continue Reading

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು. […]

Continue Reading

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

ಗೋಕರ್ಣ: ಮನುಸ್ಮøತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ […]

Continue Reading

ನಂಬಿಕೆ ಜೀವನಕ್ಕೆ ಅಮೃತ ಇದ್ದಂತೆ: ರಾಘವೇಶ್ವರ ಶ್ರೀ

ಗೋಕರ್ಣ: ನಂಬಿಕೆ ಎಂಬ ಭಾವ ಜೀವನಕ್ಕೆ ಅಮೃತ ಇದ್ದಂತೆ. ದೇವರು ನಮ್ಮನ್ನು ಕಾಪಾಡುವ ಬದಲು ಅಚಲವಾದ ನಂಬಿಕೆ ಅಥವಾ ಭರವಸೆಯೇ ನಮ್ಮನ್ನು ಕೋಟೆಯಾಗಿ ನಮ್ಮನ್ನು ಕಾಯುತ್ತದೆ. ಆದ್ದರಿಂದ ಎಲ್ಲರೂ ದೇವರು, ಧರ್ಮ, ಗುರುವಿನಲ್ಲಿ, ಒಳಿತಿನಲ್ಲಿ ನಂಬಿಕೆ ಇಟ್ಟುಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳು ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಎಂಟನೇ ದಿನವಾದ ಬುಧವಾರ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಬಲವಾದ ನಂಬಿಕೆ ಇದ್ದರೆ ಅದು […]

Continue Reading

ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಲಿ: ರಾಘವೇಶ್ವರ ಶ್ರೀ

  ಗೋಕರ್ಣ: ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಗುರುಕುಲ ಚಾತುರ್ಮಾಸ್ಯ ಆರಂಭದ ದಿನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದ ಪೂಜ್ಯರು, “ಗುರುಪೂರ್ಣಿಮೆ ಎನ್ನುವುದು ಜ್ಞಾನಚೈತನ್ಯದ ಪೂಜೆ. ಅಶೋಕೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಮೂಲ ಉದ್ದೇಶವೂ ಸುಜ್ಞಾನ ಪ್ರಸಾರ. ವಿಶ್ವವಿದ್ಯಾಪೀಠ ಕಟ್ಟಲು ಸಮಸ್ತ […]

Continue Reading

ಧರ್ಮ ಜ್ಯೋತಿಗೆ ಕುಮಟಾದಲ್ಲಿ ಸ್ವಾಗತ

ಕುಮಟಾ : ಹವ್ಯಕರ ಮೂಲಸ್ಥಾನವಾದ ಹೊನ್ನಾವರದ ಹೈಗುಂದದಿಂದ ಗೋಕರ್ಣದ ಅಶೋಕಗೆ ತೆರಳುತ್ತಿರುವ ಧರ್ಮ ಜ್ಯೋತಿಯನ್ನು ಕುಮಟಾದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಪುಷ್ಪಾರ್ಚನೆಗೆ ಇರುವುದರ ಮೂಲಕ ಸ್ವಾಗತಿಸಿದರು.   ಹೊನ್ನಾವರದಿಂದ ಹೊರಟ ಭವ್ಯ ಮೆರವಣಿಗೆಯಲ್ಲಿ ಹವ್ಯಕ ಮಹಾಮಂಡಲದ ಅಧ್ಯಕ್ಷರಾದ ಆರ್ .ಎಸ್ ಹೆಗಡೆ ಹರಿಗಿ, ಹೊನ್ನಾವರ ಮಂಡಲದ ಅಧ್ಯಕ್ಷ ಆರ್.ಜಿ ಹೆಗಡೆ ಹಾಗೂ ಪ್ರಮುಖರು ಹಾಜರಿದ್ದರು. ಶಾಸಕರ ಜೊತೆ ಬಿಜೆಪಿ ಪ್ರಮುಖರಾದ ವಿನೋದ್ ಪ್ರಭು ಹಾಗೂ ಇತರರು ಕುಮಟದಲ್ಲಿ ಧರ್ಮಜ್ಯೋತಿಯನ್ನು ಸ್ವಾಗತಿಸಿ ಮೆರವಣಿಗೆ […]

Continue Reading

ಚಾತುರ್ಮಾಸ್ಯ: ರಾಘವೇಶ್ವರ ಶ್ರೀ ಪುರಪ್ರವೇಶ

  ಗೋಕರ್ಣ: ಶ್ರೀಮಗ್ಗಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯದ ಅಂಗವಾಗಿ ಶ್ರೀಗಳ ಪುರಪ್ರವೇಶ ಅಶೋಕೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ಚಾತುರ್ಮಾಸ್ಯ ವ್ರತ ಕೈಗೊಳ್ಳಲು ಆಗಮಿಸಿದ ಪರಮಪೂಜ್ಯರನ್ನು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಡಿ.ಡಿ.ಶರ್ಮಾ, ಸತ್ಯನಾರಾಯಣ ಶರ್ಮಾ, ವಿವಿಧ ಸಮಾಜಗಳ ಗಣ್ಯರು ಸಕಲ ಗೌರವಗಳೊಂದಿಗೆ ಬರಮಾಡಿಕೊಂಡರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯ ವ್ರತ ಆಷಾಢ ಹುಣ್ಣಿಮೆಯಂದು ಬುಧವಾರ (ಜುಲೈ 13) ಅಶೋಕೆಯಲ್ಲಿ ಆರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ನಡೆಯುವ […]

Continue Reading

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ

  ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. […]

Continue Reading

ವಾಸ್ತು, ಆಗಮದಿಂದ ದೇಗುಲಕ್ಕೆ ಶೋಭೆ: ರಾಘವೇಶ್ವರ ಶ್ರೀ

  ಬೆಂಗಳೂರು: ದೇವಾಲಯಗಳು ಇತ್ತೀಚೆಗೆ ಶಾಸ್ತ್ರದ ಬದಲು ಆಡಂಬರದ ಪ್ರದರ್ಶನಕ್ಕೆ ಮಾತ್ರ ಎಂಬಂಥ ವಿಕಟ ಸ್ಥಿತಿ ಇದೆ. ವಾಸ್ತು, ಜ್ಯೋತಿಷ್ಯ, ಆಗಮಗಳು ಸರಿಯಾಗಿದ್ದಾಗ ಮಾತ್ರ ದೇವಾಲಯಕ್ಕೆ ಶೋಭೆ. ಆದ್ದರಿಂದ ದೇವಾಲಯಗಳು ಶಾಸ್ತ್ರೋಕ್ತವಾಗಿ ನಿರ್ಮಾಣಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ಬುಧವಾರ ನಡೆದ ಅಷ್ಟಬಂಧ- ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀವರ್ಚನ ನೀಡಿದರು. ದೇಗುಲಗಳು ನಮ್ಮ ಪರಂಪರೆಯ ಭಾಗ. ಭಾರತದ ಪರಂಪರೆ ಅನುಪಮವಾಗಿದ್ದು, ಪರಂಪರೆಯನ್ನು […]

Continue Reading

ಗೋ ಸಹಿತ ಬದುಕು ಬದುಕಬೇಕು- ಶ್ರೀಸಂಸ್ಥಾನ

ಗೋವು ಶೂನ್ಯ ಬದುಕು ನಮ್ಮದಾಗಬಾರದು. ಗೋ ಸಹಿತ ಬದುಕು ಬದುಕಬೇಕು ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅವರು ಗೋಸ್ವರ್ಗದಲ್ಲಿ ಕಾಮದುಘಾ ಟ್ರಸ್ಟ್ ಹಾಗೂ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಆಶ್ರಯದಲ್ಲಿ ಅನುಪಮ ಗೋಸೇವಕರಿಗಾಗಿ ನೀಡಲ್ಪಡುವ ರಾಜ್ಯ ಮಟ್ಟದ ಗೋಪಾಲ ಗೌರವ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಪ್ರಶಸ್ತಿ ಪ್ರಧಾನ ಮಾಡಿದ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಮುಖ್ಯಸ್ಥ ದಿನೇಶ್ ಶಹರಾ ಮಾತನಾಡಿ ಗೋವುಗಳು ಕುರಿತು ತಳುವಳಿಕೆ […]

Continue Reading

ಪುರುಷೋತ್ತಮ’ ಪ್ರಶಸ್ತಿ ಪ್ರಧಾನ

ಸಿದ್ದಾಪುರ: ಜಗತ್ತಿನಲ್ಲಿ ಬಹಳಷ್ಟು ತತ್ವಜ್ಞಾನಿಗಳು ಆಗಿಹೋಗಿದ್ದಾರೆ. ಆದರೆ ಶಂಕರರ ಜನ್ಮದಿನವನ್ನು ತತ್ವಜ್ಞಾನಿಗಳ ದಿನ ಎಂದು ಕರೆಯುವುದು ವಿಶೇಷವಾಗಿದೆ ಎಂದು ಶ್ರೀ ರಾಜಾರಾಮ ಕ್ಷೇತ್ರದ ಸ್ವಾಮೀಜಿಗಳಾದ ಬ್ರಹ್ಮಾನಂದ ಭಾರತಿ ಸ್ವಾಮಿಗಳು ಹೇಳಿದರು. ಅವರು ಶುಕ್ರವಾರ ತಾಲೂಕಿನ ಭಾನ್ಕುಳಿಯ ಗೋಸ್ವರ್ಗದಲ್ಲಿ ನಡೆದ ಶಂಕರ ಪಂಚಮಿಯ ಧರ್ಮಸಭೆ ಮತ್ತು ಪುರುಷೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ, ಮತ ಭೇದವಿಲ್ಲದೆ ಸಾರ್ವಕಾಲಿಕವಾದ, ಸಾರ್ವದೇಶಿಕವಾದ ಉಪದೇಶ ನೀಡಿದಂತಹ ಶಂಕರರನ್ನು ಜಗದ್ಗುರು ಎಂದು ಕರೆಯಲಾಗಿದೆ. ಕರ್ಮ ಮತ್ತು ಚಿತ್ತ ಶುದ್ಧಿಯ ಮೂಲಕ ಮೋಕ್ಷಪ್ರಾಪ್ತಿ […]

Continue Reading

ರಾಮಸೇತು ವೈಜ್ಞಾನಿಕ ಸತ್ಯ

ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು […]

Continue Reading

ಶ್ರೀ ಅಖಿಲ ಹವ್ಯಕ ಮಹಾಸಭೆಯ  79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ

ಗಡ್ಡಬಿಟ್ಟವರು ಮಾತ್ರ ಋಷಿಗಳಲ್ಲ, ಸಾಧನೆ ಮಾಡಿ ಇಂದು ಇಲ್ಲಿ ಪುರಸ್ಕೃತರಾದ ಎಲ್ಲರೂ ಋಷಿ ಸಮಾನರೇ ಆಗಿದ್ದಾರೆ. ಆದರೆ ಸಾಧನೆಯ ವಿಧಾನಗಳು ಬೇರೆ ಬೇರೆ ಎಂದು  ಡಾ.ಜಿ.ಎಲ್ ಹೆಗಡೆ ಹೇಳಿದರು. ಶ್ರೀ ಅಖಿಲ ಹವ್ಯಕ ಮಹಾಸಭೆಯ  79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಹಾಗೂ  ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭ್ಯಾಗತರಾಗಿ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್ ಹೆಗಡೆ, ನಾವು ಭವ್ಯವಾದ ಸಂಸ್ಕೃತಿ ಹೊಂದಿದ್ದೇವೆ. ದಿವ್ಯವಾದ ಇತಿಹಾಸ ಹೊಂದಿದ್ದೇವೆ. ಆದರೆ ನಮ್ಮ ಪಠ್ಯಗಳಲ್ಲಿ ರಾಬರ್ಟ್ ಕ್ಲೈವ್ ಹಾಗೂ ಅವನ ಸಂಸಾರದ ಕುರಿತು ಓದುವಂತಹ ಸ್ಥಿತಿ […]

Continue Reading

ಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ

ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮಥ್ರ್ಯ, ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, ಸಿಟ್ಟು ನಮ್ಮ ವಿವೇಕವನ್ನು ಹಾಳು ಮಾಡುತ್ತದೆ. ಸಿಟ್ಟು ಶಿವನ ಸೃಷ್ಟಿ. ಅದು ನಮ್ಮ ಕೈಯಲ್ಲಿದ್ದರೆ ಗುಣ. ಆದರೆ ಸಿಟ್ಟಿನ ಕೈಯಲ್ಲಿ ನಾವಿದ್ದರೆ […]

Continue Reading

ನಮ್ಮ ಹೃದಯವೇ ರಾಮಮಂದಿರ; ರಾಘವೇಶ್ವರ ಶ್ರೀ

ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ಲಂಕಾ ಸಾಮ್ರಾಜ್ಯ ತೊರೆದ ಬಳಿಕ ಆತ್ಮದಲ್ಲಿರುವ ರಾಮನಷ್ಟೇ ವಿಭೀಷಣನ ಆಸ್ತಿ. ವಿಭೀಷಣನ ಭವಿಷ್ಯದ ಬದುಕು ಅಮೂರ್ತವಾಗಿತ್ತು. ಅಮೂರ್ತದಿಂದ ರಾಮಮೂರ್ತಿಯನ್ನು ಕಂಡುಕೊಂಡಿದ್ದರಿಂದಲೇ ವಿಭೀಷಣನ ಮುಂದಿನ ಹಾಸಿ ಸ್ಪಷ್ಟವಾಯಿತು. ಈ ಅರಿವೇ ಮುಂದೆ […]

Continue Reading

ಆಸೆಯ ಪಾಶದಿಂದ ಮುಕ್ತಿ ಪಡೆದರಷ್ಟೇ ಮನಃಶಾಂತಿ: ರಾಘವೇಶ್ವರ ಶ್ರೀ

ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧಿಸಲು ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನ ಅನುಗ್ರಹಿಸಿದ ಅವರು, “ಆಸೆ ಮನದಾಳದಲ್ಲಿ ಹುಟ್ಟಿಕೊಂಡರೆ ತಾನು ಸುಮ್ಮನಿರುವುದಿಲ್ಲ. ನಮ್ಮನ್ನು ಸಮ್ಮನಿರಲು ಬಿಡುವುದಿಲ್ಲ. ಆಸೆ ಅನಾಹುತಕ್ಕೆ ಕಾರಣ. ಇದು ರಜೋಗುಣ. ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ […]

Continue Reading

ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ: ರಾಘವೇಶ್ವರ ಸ್ವಾಮೀಜಿ

ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಎರಡನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ರಾಮ ಸೀತೆಯ ಪ್ರೀತಿ ಪರಿಪೂರ್ಣ. ಪರಿಪೂರ್ಣ ಪ್ರೀತಿಯಷ್ಟೇ ವಿಶ್ವದ ಪ್ರೀತಿಯಾಗಿ ಭಗವತ್ ಪ್ರೀತಿಯಾಗಿ ಮಾರ್ಪಡುತ್ತದೆ ಎಂದು ವಿಶ್ಲೇಷಿಸಿದರು. ಪ್ರೀತಿ ಹಾಗೂ ತ್ಯಾಗಕ್ಕೆ ರಾಮ […]

Continue Reading

ರಾಮನ ಸೀತಾಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ ಅನುಗ್ರಹಿಸಿದ ಅವರು, “ಜಗತ್ತಿನ ತಂದೆ ತಾಯಿಗಳನ್ನು ಒಂದಾಗಿಸಿದ್ದು ರಾಮಸೇತು. ತ್ರೇತಾಯುಗ ಯುಗದಲ್ಲಿ ಸೀತೆಗಾಗಿ ವಿಶ್ವಯುದ್ಧವನ್ನೇ ರಾಮ ನಡೆಸಿದ್ದಾನೆ. ಸಮುದ್ರಕ್ಕೆ ಸೇತುವೆ ನಿರ್ಮಿಸಿದ್ದು ಸೀತೆಗಾಗಿ. ಇಂಥ ಪ್ರೀತಿಯನ್ನು […]

Continue Reading