ರಾಮಚಂದ್ರಾಪುರ ಮಠದಿಂದ ಸಂತ್ರಸ್ತರ ಪರಿಹಾರ ಕೇಂದ್ರ
ಬೆಂಗಳೂರು: ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶ್ರೀರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಬಳಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ. ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೇ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸಲಾಗುತ್ತಿದೆ ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಅವರು, ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿದರು. ರಾಜ್ಯದ ಜನ ಭೀಕರ ಪ್ರವಾಹದಿಂದ […]
Continue Reading