ಅಮೃತಧಾರಾ ಗೋಶಾಲೆಯಲ್ಲಿ ಸಂಪನ್ನಗೊಂಡಿತು ಗೋಮಾತಾಸಪರ್ಯಾ~ಗೋಪಾಷ್ಟಮೀ
ಪೆರ್ಲ: ಗೋಪಾಷ್ಟಮಿಯ ಶುಭ ಸಂದರ್ಭದಲ್ಲಿ ಶುದ್ಧ ದೇಶೀಯ ತಳಿಯ ಗೋಮಯದಿಂದ ತಯಾರಿಸಿದ ಗೋವರ್ಧನಗಿರಿಯಲ್ಲಿ ಗುರುವಾರ ರಾತ್ರಿ ಭಗವಾನ್ ಶ್ರೀಕೃಷ್ಣನಿಗೆ ನಡೆದ ರಂಗಪೂಜೆಯನ್ನು ದೀಪದ ಬೆಳಕಿನಲ್ಲಿ ಭಕ್ತಿಭಾವದೊಂದಿಗೆ ಆಚರಿಸಿ ಅನೇಕ ಭಕ್ತಾದಿಗಳು ಕಣ್ತುಂಬಿಕೊಂಡರು. ಶ್ರೀಸಂಸ್ಥಾನದವರ ದಿಗ್ದರ್ಶನದಲ್ಲಿ ನಡೆಯುತ್ತಿರುವ ಕಾಸರಗೋಡು -ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಕಳೆದ ಒಂದುವಾರದಿಂದ ನಡೆದು ಬರುತ್ತಿದ್ದ ಗೋಮಾತಾ ಸಪರ್ಯಾ ಹಾಗೂ ೮ನೇ ವರ್ಷದ ಗೋಪಾಷ್ಟಮೀ ಮಹೋತ್ಸವವು ಗುರುವಾರ ರಾತ್ರಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನವಾಯಿತು. ಬೆಳಗ್ಗೆ ಗಣಪತಿ ಹವನ, ಕಾಮಧೇನು ಹವನ, […]
Continue Reading