ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಭವ್ಯ ಭವಿಷ್ಯದ ಸೂಚಕ: ರಾಘವೇಶ್ವರ ಶ್ರೀ
ಗೋಕರ್ಣ: ಭವ್ಯ ಭವಿಷ್ಯದ ಸೂಚಕ, ದೇಶದ ದಿಶೆಯನ್ನೇ ಬದಲಾಯಿಸಬಲ್ಲ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಯ ಸಂಕಲ್ಪ ವಿದ್ಯಾ ಚಾತುರ್ಮಾಸ್ಯ ಸಂದರ್ಭದಲ್ಲಿ ಸಾಕಾರಗೊಂಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕವನದ ಆವರಣದಲ್ಲಿ ನಡೆದ 27ನೇ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ತಕ್ಷಶಿಲೆಯ ಪುನಃಸೃಷ್ಟಿ ಇದಾಗಲಿದೆ. ದೇಶದ ಭವಿಷ್ಯವನ್ನೇ ಬದಲಾಯಿಸಬಲ್ಲ ವ್ಯಕ್ತಿತ್ವಗಳು ಇಲ್ಲಿ ನಿರ್ಮಾಣವಾಗಲಿವೆ ಎಂದರು. ಶಿವನ ಆತ್ಮಲಿಂಗ ಕ್ಷೇತ್ರ, ಆಂಜನೇಯನ ಜನ್ಮಭೂಮಿ, ಶ್ರೀಶಂಕರರು ಮೂರು ಬಾರಿ ಪಾದಸ್ಪರ್ಶ ಮಾಡಿದ ಪುಣ್ಯಭೂಮಿ, ದೈವರಾತರ ಕರ್ಮಭೂಮಿಯಾದ ಗೋಕರ್ಣದ […]
Continue Reading