ಮಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯ, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ. ಬಿ. ಶೆಟ್ಟಿ ದಂತ ವಿದ್ಯಾಲಯ, ಮುಜುಂಗಾವು ಶ್ರೀಭಾರತೀ ನೇತ್ರ ಚಿಕಿತ್ಸಾಲಯಗಳ ಸಹಯೋಗದಲ್ಲಿ ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯ ಆವರಣದಲ್ಲಿ, ಜನವರಿ 20ರಂದು ವೈದ್ಯಕೀಯ, ದಂತ, ನೇತ್ರ ತಪಾಸಣೆ ಶಿಬಿರ ನಡೆಸಲಾಯಿತು. ಅದರೊಂದಿಗೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ವಿಭಾಗಗಳ ವತಿಯಿಂದ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು.
ಸುವರ್ಣ ಮಹೋತ್ಸವ ಆಚರಿಸುತ್ತಿರುವ ವಿಟ್ಲ ಬೆನಕ ಕ್ಲಿನಿಕ್‌ನ ಡಾ. ಅರವಿಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಭಾರತೀ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷ ಶ್ರೀ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.-ಕಾಸರಗೋಡು ಹವ್ಯಕ ಮಹಾಜನಸಭಾ ಅಧ್ಯಕ್ಷ ಶ್ರೀ ಎನ್. ಕೃಷ್ಣ ಭಟ್, ಮಂಗಳೂರು ಹವ್ಯಕ ಸಭಾ ಅಧ್ಯಕ್ಷ ಶ್ರೀಬಾಲಸುಬ್ರಹ್ಮಣ್ಯ ಕಬೆಕ್ಕೋಡು, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಮುರಳಿಮೋಹನ ಚೂಂತಾರು, ಯೋಗ ನಿರ್ದೇಶಕ ಶ್ರೀ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ಗೌರವ ಸಲಹೆಗಾರ ಡಾ. ರಾಜೇಂದ್ರಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ಶ್ರೀಕೃಷ್ಣ ನೀರಮೂಲೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಂಶುಪಾಲ ಡಾ. ಈಶ್ವರಪ್ರಸಾದ್ ಎ. ವಂದಿಸಿದರು.