ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ

  ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. […]

Continue Reading

ಭಾವ, ರಾಗ, ತಾಳ ಮೇಳೈಸಿದರೆ ಜೀವನ ಆಹ್ಲಾದಕರ: ರಾಘವೇಶ್ವರ ಶ್ರೀ

ಗೋಕರ್ಣ: ಭಾವ, ರಾಗ, ತಾಳ ಮೇಳೈಸಿದಾಗ ಸಂಗೀತ ಹೇಗೆ ಸುಶ್ರಾವ್ಯವಾಗುವುದೋ ಜೀವನ ಆಹ್ಲಾದಕರ ಆಗಬೇಕಾದರೆ ಮನಸ್ಸು, ಮಾತು ಮತ್ತು ಕೃತಿ ಒಂದಾಗಬೇಕು ಎಂದು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಶುಕ್ರವಾರ ಅಶೋಕೆಯ ವಿದ್ಯಾವಿಶ್ವ ಸಭಾಂಗಣದಲ್ಲಿ ಆಯೋಜಿಸಿದ್ದ ಭಾವಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಜೀವನ ಕೂಡಾ ಒಂದು ಸಂಗೀತ. ಜೀವನ ಮುನ್ನಡೆಯಬೇಕಾದರೆ ಅಂದರೆ ಜೀವನದಲ್ಲಿ ‘ಭರತ’ ಬರಬೇಕಾದರೆ ಭಾವ, ರಾಗ ಹಾಗೂ ತಾಳ ಅಗತ್ಯ. […]

Continue Reading

ವಿವಿವಿಯಲ್ಲಿ ಎರಡು ದಿನಗಳ ಸಂಗೀತೋತ್ಸವಕ್ಕೆ ತೆರೆ ಸಂಗೀತ ಮೋಕ್ಷಕ್ಕೆ ಸಾಧನ: ರಾಘವೇಶ್ವರ ಶ್ರೀ

ಗೋಕರ್ಣ: ಸಂಗೀತ ಮೋಕ್ಷಕ್ಕೆ ಸಾಧನ; ಇದು ಕೇವಲ ಮನಸ್ಸಿಗೆ ಮುದನೀಡುವ ಸಾಧನವಲ್ಲ. ಸಂಗೀತದ ಮೂಲಕ ಜನತೆ ಮತ್ತು ಜನಾರ್ದನನನ್ನು ಕೂಡಾ ಮೆಚ್ಚಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಸಂಗೀತೋತ್ಸವದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು, “ಸಂಗೀತ ಮೋಕ್ಷಕ್ಕೆ ಸಾಧನ ಎಂದು ಯಾಜ್ಞವಲ್ಕ್ಯ ಸ್ಮøತಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಂಗೀತ ಕೇವಲ ಮನೋರಂಜನೆಯಲ್ಲ ಸಾಧನವಲ್ಲ. ಜನರನ್ನು ಮಾತ್ರವಲ್ಲದೇ ಇದರಿಂದ ಜನಾರ್ದನನ್ನೂ ಮೆಚ್ಚಿಸಬಹುದು. ವಿದ್ಯಾರ್ಥಿಗಳು ಮೇರು ಕಲಾವಿದರಿಂದ ಸ್ಫೂರ್ತಿ ಪಡೆದು ಇಂಥ […]

Continue Reading

ಸಂಗೀತೋತ್ಸವಕ್ಕೆ ಅದ್ದೂರಿ ಚಾಲನೆ: ವಿಷ್ಣುಗುಪ್ತ ವಿವಿಯಲ್ಲಿ ನಾದವೈಭವ

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಬುಧವಾರ ಎರಡು ದಿನಗಳ ಸಂಗೀತೋತ್ಸವಕ್ಕೆ ಖ್ಯಾತ ಸಂಗೀತ ವಿದುಷಿ ವಿ.ಕಾಂಚನ ರೋಹಿಣಿ ಸುಬ್ಬರತ್ನಂ ಚಾಲನೆ ನೀಡಿದರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿದ ಪಾರಂಪರಿಕ ಸಂಗೀತ ವಿದ್ಯೆ, ಕಲೆಯನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಯಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಆಯೋಜಿಸಿದ್ದ ಈ ಸಂಗೀತೋತ್ಸವದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದ ದಿಗ್ಗಜರಿಂದ ಗುರುಕುಲದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾವಿಶ್ವ ಸಭಾಂಗಣದಲ್ಲಿ ದಿನವಿಡೀ ನಡೆದ ಸಂಗೀತೋತ್ಸವದ ಮೊದಲ […]

Continue Reading

ಯೋಗ ಜೀವ-ದೇವ ಬೆಸೆಯುವ ಬಂಧ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಯುಕ್ತ ಆಹಾರ, ವಿಹಾರ, ಚಟುವಟಿಕೆ ಮೂಲಕ ನಿದ್ದೆ, ಸ್ವಪ್ನ, ಜಾಗೃತಸ್ಥಿತಿ ಮತ್ತು ಸಮಾದಿ ಸ್ಥಿತಿಯನ್ನು ಆನಂದಿಸುವುದೇ ನಿಜವಾದ ಯೋಗ. ಯೋಗ ಜೀವಾತ್ಮ ಮತ್ತು ಪರಮಾತ್ಮನನ್ನು ಬೆಸೆಯುವ ಪವಿತ್ರ ಬಂಧ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ನುಡಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸೋಮವಾರ ಹಮ್ಮಿಕೊಂಡಿದ್ದ “ಯೋಗಾಂತರಂಗ” ಅಂತರ್ಜಾಲ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಆಹಾರ, ವಿಹಾರ, ಕ್ರಿಯೆ ಯುಕ್ತವಾಗಿದ್ದಾಗ ಜಾಗೃತಿ, ನಿದ್ದೆ, ಸ್ವಪ್ನಸ್ಥಿತಿಯ ಆನಂದ ಸವಿಯುವ […]

Continue Reading

ಸತ್ಕಾರ್ಯಗಳೇ ಸುಖನಿದ್ದೆಯ ಗುಟ್ಟು: ರಾಘವೇಶ್ವರ ಸ್ವಾಮೀಜಿ

ಕಾರವಾರ/ ಗೋಕರ್ಣ: ಭಾರತೀಯ ಪರಂಪರೆಯಲ್ಲಿ ನಿದ್ರೆಯೂ ದೈವಸ್ವರೂಪ. ಸತ್ಯ ಮತ್ತು ಧರ್ಮ ಮಾರ್ಗದಲ್ಲಿ ನಡೆದು ಆತ್ಮಸಾಕ್ಷಿ ಒಪ್ಪುವಂಥ ಸತ್ಕಾರ್ಯಗಳನ್ನು ಮಾಡುವ ಮೂಲಕ ನಿದ್ರಾದೇವಿಯಿಂದ ಸುಖನಿದ್ದೆಯೆಂಬ ವರ ಪಡೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಸಲಹೆ ಮಾಡಿದರು. ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಜ್ಞಾನ ವಿಜ್ಞಾನ ಚಿಂತನ ಸತ್ರ ಮಾಲಿಕೆಯಡಿ ‘ಸ್ವಸ್ಥ ಮನಸ್ಸಿಗಾಗಿ ಸುಖನಿದ್ದೆ’ ಎಂಬ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಪ್ತಶತಿಯ “ಯಾದೇವಿ ಸರ್ವಭೂತೇಶು ನಿದ್ರಾರೂಪೇಣ ಸಂಸ್ಥಿತಾ..” ಎಂಬ ಸ್ತೋತ್ರ ನಮ್ಮ […]

Continue Reading

ಮಕ್ಕಳ ಕಲಿಕೆಗೆ ಉತ್ತಮ ಪರಿಸರ, ಸಂಸರ್ಗ ಅಗತ್ಯ; ರಾಘವೇಶ್ವರ ಶ್ರೀ

ಕಾರವಾರ: ಗುಣ- ದೋಷಗಳೆರಡಕ್ಕೂ ಸಹವಾಸವೇ ಕಾರಣ. ಆದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಪರಿಸರ ಮತ್ತು ಉತ್ತಮ ಸಂಸರ್ಗ ಕಲ್ಪಿಸುವ ಮೂಲಕ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪುಗೊಳಿಸುವ ಅಗತ್ಯವಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಗುರುಕುಲಗಳ ವಿದ್ಯಾರಂಭ ಸಮಾರಂಭದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ರಾಮಾಯಣದ ರಾಮ ಅಭಯ ಸ್ತೋತ್ರವನ್ನು ಆನ್‍ಲೈನ್ ಮೂಲಕ ಗುರುಕುಲದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ವಿದ್ಯಾರಂಭಕ್ಕೆ ಶ್ರೀಗಳು ಚಾಲನೆ ನೀಡಿದರು. ಕಾದ ಕಬ್ಬಿಣದ ಮೇಲೆ […]

Continue Reading

ನಿರಂತರ ಜ್ಞಾನ ದೀಪೋತ್ಸವದಿಂದ ದೇಶ ಪ್ರಜ್ವಲ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಒಂದು ದೀಪದಿಂದ ಸಾವಿರ ದೀಪಗಳು ಹೊತ್ತಿಕೊಳ್ಳುವಂತೆ ಒಬ್ಬ ಸಾಧಕ ಅಸಂಖ್ಯಾತ ಯುವ ಮನಸ್ಸುಗಳಿಗೆ ಪ್ರೇರಣೆಯಾಗಬಲ್ಲರು. ಇಂಥ ಜ್ಞಾನ ದೀಪೋತ್ಸವ ನಿರಂತರವಾದಾಗ ಇಡೀ ದೇಶ ಪ್ರಜ್ವಲಿಸಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಭಾನುವಾರ ಆಯೋಜಿಸಿದ್ದ ‘ಸಾಧನೆಯ ಮಾರ್ಗ’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಅತ್ಯಂತ ಕಿರಿಯ ವಯಸ್ಸಿನಲ್ಲೇ ಮಹತ್ಸಾಧನೆ ಮಾಡಿ ದೇಶ ಹಾಗೂ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ.ಕಾರ್ತಿಕ್ ಹೆಗಡೆಕಟ್ಟಿ […]

Continue Reading

ಪ್ರಧಾನಿ ಕಚೇರಿಯ ಉಪ ಕಾರ್ಯದರ್ಶಿ ಡಾ.ಕಾರ್ತಿಕ ಹೆಗಡೆಕಟ್ಟೆ ಜತೆ ಸಂವಾದ ನಾಳೆ

ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಈ ತಿಂಗಳ 30ರಂದು ಭಾನುವಾರ ಬೆಳಿಗ್ಗೆ 11.45ರಿಂದ “ಸಾಧನೆಯ ಮಾರ್ಗ” ಎಂಬ ಅಂತರ್ಜಾಲ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಉಪ ಕಾರ್ಯದರ್ಶಿ, ಉತ್ತರ ಕನ್ನಡ ಮೂಲದ ಪ್ರತಿಭಾವಂತ ಯುವ ಐಎಎಸ್ ಅಧಿಕಾರಿ ಡಾ.ಕಾರ್ತಿಕ ಹೆಗಡೆಕಟ್ಟೆ ಅವರು ‘ಸಾಧನೆಯ ಮಾರ್ಗ’ ವಿಷಯದ ಬಗ್ಗೆ ವಿಚಾರ ಮಂಡಿಸುವರು. ವಿದ್ಯಾ ಪರಿಷತ್ ಅಧ್ಯಕ್ಷ ಎಂ.ಆರ್.ಹೆಗಡೆ, ಆಡಳಿತಾಧಿಕಾರಿ ಸುರೇಂದ್ರ ಹೆಗಡೆ ಮತ್ತಿತರರು ಭಾಗವಹಿಸುವರು. […]

Continue Reading

ಕಲಿಕೆ ಜ್ಞಾನಮಯ, ಆನಂದಮಯವಾದರೆ ವಿದ್ಯೆ ಸಾರ್ಥಕ: ರಾಘವೇಶ್ವರ ಶ್ರೀ

ಗೋಕರ್ಣ: ಕಲಿಕೆ ಜ್ಞಾನಮಯ ಮತ್ತು ಆನಂದಮಯವಾಗಿದ್ದಾಗ ಮಾತ್ರ ವಿದ್ಯೆ ಸಾರ್ಥಕವಾಗುತ್ತದೆ ಎಂದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಆಯೋಜಿಸಿದ್ದ ‘ಆತಂಕದ ಪರಿಸ್ಥಿತಿಯಲ್ಲಿ ಧನಾತ್ಮಕವಾಗಿ ಯೋಚಿಸಲು ಸರಳ ಸೂತ್ರಗಳು’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಇಂದಿನ ಶಿಕ್ಷೆ ಜ್ಞಾನ ಮತ್ತು ಭೀತಿಯಿಂದ ಕೂಡಿದೆ. ಈ ಪರಿಸ್ಥಿತಿ ಬದಲಾಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಪರೀಕ್ಷೆಯನ್ನು ಸ್ವೀಕಾರ ಮಾಡುವಂತಿರಬೇಕು; ಮಗು ಖುಷಿ ಖುಷಿಯಾಗಿದ್ದಷ್ಟೂ […]

Continue Reading

ಅರ್ಥಶಾಸ್ತ್ರ ಭವಿಷ್ಯಕ್ಕೆ ಅರ್ಥ ನೀಡುವಂಥದ್ದು: ರಾಘವೇಶ್ವರ ಶ್ರೀ

ಗೋಕರ್ಣ: ಅರ್ಥಶಾಸ್ತ್ರದ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅರ್ಥ ನೀಡುವಂತಿರಬೇಕು; ಜತೆಗೆ ದೇಶಕ್ಕೆ ಅರ್ಥ ಕೊಡುವ, ದೇಶದ ಸಂಪತ್ತಾಗಿ ರೂಪುಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಸಿಎ, ಸಿಎಸ್ ಫೌಂಡೇಷನ್‍ಗಾಗಿ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಉಚಿತ ಆನ್‍ಲೈನ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸಿಎ, ಸಿಎಸ್ ತರಬೇತಿ ಬೇಕು ಎಂಬ ಬೇಡಿಕೆ ಬಂದದ್ದು ವಿವಿವಿ ಗುರುಕುಲದ ವಿದ್ಯಾರ್ಥಿಗಳಿಂದ. ಮಕ್ಕಳು ಹಾಗೂ ಗೋವುಗಳು ದೇವರಿಗೆ ಸಮಾನ. ವಿದ್ಯಾರ್ಥಿಗಳ ಒತ್ತಾಸೆಯನ್ನು ಈಡೇರಿಸುವುದು ಕರ್ತವ್ಯ […]

Continue Reading

ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ವಿವಿವಿ ಆನ್‍ಲೈನ್ ತರಬೇತಿ

ಗೋಕರ್ಣ: ಸಿಇಟಿ, ನೀಟ್, ಕೆವಿಪಿವೈ, ಎನ್‍ಇಎಸ್‍ಟಿ, ಜೆಇಇ ಮತ್ತಿತರ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆನ್‍ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯವರಿಗೆ ಕೂಡಾ ಗುಣಮಟ್ಟದ ತರಬೇತಿ ದೊರಕಬೇಕು ಎಂಬ ಉದ್ದೇಶದಿಂದ ಆರಂಭಿಸಲಾದ ತರಬೇತಿ ಈ ತಿಂಗಳ 18ರಂದು ಉದ್ಘಾಟನೆಗೊಳ್ಳಲಿದೆ. ಪ್ರಥಮ ಪಿಯುಸಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ಮುಕ್ತವಾಗಿರುತ್ತದೆ. ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳು ಎಂಬಿಬಿಎಸ್, ಐಐಟಿ, ಎನ್‍ಐಟಿ, ಐಐಎಸ್‍ಇಎಆರ್, ಎನ್‍ಐಎಸ್‍ಇಎಆರ್, ಎನ್‍ಎಟಿಎ, ಎಂಜಿನಿಯರಿಂಗ್ ಕೋರ್ಸ್‍ಗಳಿಗೆ ಸೇರಲು […]

Continue Reading

ವಿಷ್ಣುಗುಪ್ತ ವಿಶ್ವವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

  ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕøತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ ಆರಂಭಿಸಿರುವ ಗುರುಕುಲಗಳಿಗೆ ಸಮಾಜದಿಂದ ಅದ್ಭುತ ಸ್ಪಂದನೆ ವ್ಯಕ್ತವಾಗಿದ್ದು, ಬೆಳೆಯುವ ಕುಡಿಗಳ ಉತ್ಸಾಹದಿಂದ ಸ್ಫೂರ್ತಿ ಪಡೆದು ಹಾಲಕ್ಕಿ ಸಂಸ್ಕøತಿಯ ಸಂರಕ್ಷಣೆ ಮತ್ತು ಸಂವರ್ಧನೆ ಉದ್ದೇಶದಿಂದ ಹಾಲಕ್ಕಿ ಗುರುಕುಲ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಮುಕ್ರಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದ […]

Continue Reading

ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಪರಿಸರದಲ್ಲಿ ದೀಪಾವಳಿಯ ಆನಂದಮಯ ಆಚರಣೆ

  ಶ್ರೀರಾಮಚಂದ್ರಾಪುರ ಮಠದಿಂದ ಪ್ರತಿಷ್ಠಾಪಿಸಲ್ಪಡುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ – ರಾಜರಾಜೇಶ್ವರಿ ಗುರುಕುಲದ ಆವರಣದಲ್ಲಿ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು‌. ಗುರುಕುಲಗಳ ಆರ್ಯೆಯರಾದ ಕು‌|| ಪವಿತ್ರಾ ಭಟ್, ಶ್ರೀಮತಿ ಜ್ಯೋತಿ ಕುಮಾರಿ, ಆರ್ಯರಾದ ಶ್ರೀ ಸದಾನಂದ ಹೆಬ್ಬಾರ್, ಶ್ರೀ ಅಕ್ಷಯ್ ಹಾಗೂ ವಿದ್ಯಾರ್ಥಿನಿ ಕು. ವಸಂತಾ ಇವರೆಲ್ಲರೂ ಜತೆಗೂಡಿ ಹಿಂದೂ ಧರ್ಮದ ಪ್ರತೀಕವಾದ ಸ್ವಸ್ತಿಕ್ ಆಕೃತಿಯಲ್ಲಿ ಹಣತೆಗಳನ್ನು ಇರಿಸಿ ದೀಪ ಬೆಳಗಿದರು. ಈ ಮೂಲಕ ಸ್ವಸ್ತಿಕಾಕೃತಿಯಲ್ಲಿ ಬೆಳಗು […]

Continue Reading

ಉರುವಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನ

ಉರುವಾಲು ಶ್ರೀಭಾರತೀ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಣ್ಣಪ್ಪ ದ್ವಜಾರೋಹಣ ನಡೆಸಿದರು. ಸೇವಾಸಮಿತಿ ಅಧ್ಯಕ್ಷ ಶಂಕರನಾರಾಯಣ ಭಟ್, ಮುಖ್ಯಶಿಕ್ಷಕಿ ಶೋಭಿತಾ ಕೆ. ಆರ್. ಮತ್ತಿತ್ತರರು ಉಪಸ್ಥಿತರಿದ್ದರು.

Continue Reading

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಈ ದಿನ ಸ್ಮರಿಸಬೇಕಾದ ಭಾರತೀಯರಾದ ನಮ್ಮ ಆದ್ಯ ಕರ್ತವ್ಯ – ಶ್ರೀ ರಾಜಶೇಖರ್ ಕಾಕುಂಜೆ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ನಡೆಸಲಾಯಿತು. ಬಿ.ಎ.ಎಸ್.ಎಫ್. ಪ್ರಧಾನ ವ್ಯವಸ್ಥಾಪಕ ಶ್ರೀ ರಾಜಶೇಖರ್ ಕಾಕುಂಜೆ ಇವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಭಾರತೀಯರನ್ನು ಈ ದಿನ ಸ್ಮರಿಸಬೇಕಾದುದು ನಮ್ಮ ಆದ್ಯ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಕೋವಿಡ್ – 19 ರ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಅರಿವು ಮೂಡಿಸಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಇದರ ಅಧ್ಯಕ್ಷ ಶ್ರೀ ಹರೀಶ್ ಕೆ., ಕಾರ್ಯದರ್ಶಿ ಶ್ರೀ ಶ್ರೀಧರ್ ರಾಜ್ […]

Continue Reading

ಉರುವಾಲು ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶ

ಶ್ರೀರಾಮಚಂದ್ರಾಪುರಮಠದ ಧರ್ಮಚಕ್ರ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಉರುವಾಲು ಶ್ರೀ ಭಾರತೀ ಆಂಗ್ಲಮಾದ್ಯಮ ಪ್ರೌಢಶಾಲೆ ಒಟ್ಟು ೧೦ ಮಕ್ಕಳು ಪರೀಕ್ಷೆ ಬರೆದಿದ್ದು, ೮ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಹಾಗೂ ೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶೇ.೧೦೦ ಫಲಿತಾಂಶ ದಾಖಲಿಸಿದೆ. ಅಸ್ಮಿತ್ ೬೧೩ ಅಂಕ ಪಡೆಯುವ ಮೂಲಕ ಶಾಲೆ ಪ್ರಥಮ ಸ್ಥಾನ, ಅಪೂರ್ವ ೬೦೭ ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Continue Reading

ಹಂಪಿನಗರ ಶ್ರೀಭಾರತೀ ವಿದ್ಯಾಲಯಕ್ಕೆ ರಾಜ್ಯದಲ್ಲಿ ಏಳನೇ ರ‍್ಯಾಂಕ್

ಬೆಂಗಳೂರು ಹಂಪಿನಗರ ಶ್ರೀಭಾರತೀ ವಿದ್ಯಾಲಯ ಶಾಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೨೫ ವಿದ್ಯಾರ್ಥಿಗಳು ಹಾಜರಾಗಿದ್ದು, ೬ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, ೧೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆಯುವ ಮೂಲಕ ಶೇ.೮೮ ಫಲಿತಾಂಶ ದಾಖಲಿಸಿದೆ. ಸುದೀಕ್ಷಾ ಶೇ.೯೯.೦೪ (೬೧೯/೬೨೫) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೭ ನೇ ಸ್ಥಾನ ಪಡೆದಿದ್ದಾರೆ. ಗಣಿತ ಹಾಗೂ ಕನ್ನಡ ವಿಷಯಗಳಲ್ಲಿ ಪೂರ್ಣಾಂಕವನ್ನು ಗಳಿಸಿದ್ದಾರೆ. ಸ್ಫೂರ್ತಿ ಹಾಗೂ ಪೂರ್ವಿ ಅವರು ಶೇ.೯೩.೬ ಅಂಕದೊಂದಿಗೆ ಶಾಲೆಗೆ ದ್ವಿತೀಯ ಸ್ಥಾನವನ್ನು, ಪಲ್ಲವಿ ಶೇ.೯೨.೬೪ ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Continue Reading

ವಿವಿವಿ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸದಿಕ್ಕು: ರಾಘವೇಶ್ವರ ಶ್ರೀ

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ ಸ್ಥಾಪನೆಯ ಉದ್ದೇಶ ಎಂದು ಹೇಳಿದರು.ಚಾಣಕ್ಯ ಇಡೀ ಗುರುಕುಲಕ್ಕೆ […]

Continue Reading

ಪಿಯುಸಿ ಫಲಿತಾಂಶ ವಿಶೇಷ ದಾಖಲೆ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ವಿಶೇಷ ದಾಖಲೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸಿದರೆ ವಾಣಿಜ್ಯ ವಿಭಾಗದಲ್ಲಿ ಶೇ. 95 ಫಲಿತಾಂಶ ದಾಖಲಿಸಿದೆ. ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಭೈರವಿ ವಿನಾಯಕ ಹೆಗಡೆ ಅವರು ಶೇ. 84.33 ಅಂಕ ಗಳಿಸಿದ್ದಾರೆ. ಅವರು ಸಂಸ್ಕೃತದಲ್ಲಿ 98 ಅಂಕ ಮತ್ತು ಭೌತಶಾಸ್ತ್ರದಲ್ಲಿ87 ಅಂಕ […]

Continue Reading