ನಂತೂರು: ಫಾಲ್ಗುನ ಕೃಷ್ಣ ನವಮಿಯಂದು (12-03-2026) ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟಿಸಲಾಯಿತು. ಮಂಗಳೂರು ಆರ್.ಆರ್.ವಿ.ಎಸ್. ಮತ್ತು ಕೋ ಎಲ್.ಎಲ್.ಪಿ. ಚಾರ್ಟರ್ಡ್ ಅಕೌಂಟೆಂಟ್ಸ್ ಪಾಲುದಾರ ವಿಘ್ನೇಶ ಎಮ್. ಅವರು ಉದ್ಘಾಟಿಸಿ ‘ಇದು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಮತ್ತು ಆವಶ್ಯಕ. ಪರಿಣಾಮಕಾರಿ ಶಿಕ್ಷಣಕ್ಕೆ ಒತ್ತು ನೀಡಿದ ಆಡಳಿತ ಮಂಡಳಿ ಉತ್ತಮ ಭವಿಷ್ಯ ರೂಪಿಸುವ ಕೈಂಕರ್ಯ ಮಾಡಿದೆ’ ಎಂದು ಹೇಳಿದರು.
ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿ ‘ಈ ತಾಂತ್ರಿಕ ವ್ಯವಸ್ಥೆಯನ್ನು ಶಿಕ್ಷಕರು ಬಳಸಿ, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಲು ಪ್ರೇರೇಪಿಸಬೇಕು. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು. ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮಾತನಾಡಿ ‘ಶೈಕ್ಷಣಿಕ ಸಂಸ್ಥೆಯು ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಸ್ಥೆಯ ಮಕ್ಕಳು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದರು.
ಕೋಶಾಧಿಕಾರಿ ಉದಯಶಂಕರ್ ನೀರ್ಪಾಜೆ, ಟ್ಯಾಗ್ ಹೈವ್ ಸಂಸ್ಥೆಯ ವ್ಯವಸ್ಥಾಪಕ ದಿನೇಶ್ ಕೊಡ್ಕಣಿ, ಪ್ರಾಂಶುಪಾಲ ಸಂದೀಪ್ ಆಚಾರ್ಯ ಉಪಸ್ಥಿತರಿದ್ದರು.