ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ : ಅರವಿಂದ ರೈ ಅರ್ಪಿಣಿಗುತ್ತು

ವಿದ್ಯಾಲಯ

ನಂತೂರು ಮಾ.೮ : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀಸಭಾಭವನದಲ್ಲಿ ಶ್ರೀ ಭಾರತೀ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ದಿನಾಚರಣೆಯನ್ನು ಆಯೋಜಿಸಲಾಯಿತು.

ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಅರ್ಪಿಣಿಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶ್ರೀ ಭಾರತೀ ವಿದ್ಯಾ ಸಂಸ್ಥೆಯು ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ನೀಡುತ್ತದೆ. ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ. ನಾಡಿನ ಅನೇಕ ಕಡೆಗಳಿಗೆ ತೆರಳಿದಾಗ ಈ ಅಂಶ ಬೆಳಕಿಗೆ ಬರುತ್ತದೆ. ಮೊಬಲನ್ನು ಹೆಚ್ಚು ಬಳಸದೇ, ಶಿಕ್ಷಣ, ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸುವತ್ತ ಗಮನಹರಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಪುಣೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಅರವಿಂದ ರೈ ಅವರು ಸ್ಪರ್ಧೆಗಳಿಗೆ ಚಾಲನೆ ನೀಡಿ, ಮಾತನಾಡಿ, ಭಾವನಾತ್ಮಕವಾಗಿ ಸ್ಪಂದಿಸುವ ವ್ಯಕ್ತಿತ್ವ ರೂಪುಗೊಳ್ಳಬೇಕು. ಮಾನವೀಯ ಮೌಲ್ಯಗಳನ್ನು ಉಳಿಸಿ, ಬೆಳೆಸುವ ಪ್ರಕ್ರಿಯೆ ಹೆಚ್ಚಾಗಬೇಕು. ಉದ್ಯೋಗಕ್ಕಾಗಿ ಶಿಕ್ಷಣವಾಗಬಾರದು. ಜೀವನಪೂರ್ತಿ ಯಶಸ್ಸಿನ ಮೆಟ್ಟಿಲುಗಳು ಇರಬೇಕು ಎಂದು ಹೇಳಿದರು.

ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್‌ದಾಸ್ ಎ. ಅಧ್ಯಕ್ಷತೆ ವಹಿಸಿ, ಮಾತನಾಡಿ, ತಂದೆ, ತಾಯಿಯರಿಗೆ, ಹಿರಿಯರಿಗೆ ಗೌರವ ನೀಡುವ ಸಂಪ್ರದಾಯವನ್ನು ಮರೆಯಲೇಬಾರದು. ತಂದೆ ತಾಯಿಯ ಅವಗಣನೆ ಸಲ್ಲದು. ಕೂಡಿ ಬಾಳಬೇಕು, ಪ್ರೀತಿ, ವಿಶ್ವಾಸ, ನಂಬಿಕೆ ಉಳಿಯಬೇಕು. ಸ್ವಾವಲಂಬಿಯಾಗಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಕ್ಷಿತ್ ರೈ ಪುಣೆ ಅವರು ಮಾತನಾಡಿ, ಮೊಬಲ್, ಟಿವಿ, ಸಾಮಾಜಿಕ ಜಾಲತಾಣಗಳು ನಮ್ಮ ದಾರಿ ತಪ್ಪಿಸುತ್ತವೆ. ಅದಕ್ಕೆ ಕಡಿವಾಣ ಹಾಕಬೇಕು. ಸಮಾಜ ಎಲ್ಲವನ್ನೂ ಕೊಡುತ್ತದೆ. ಕೆಟ್ಟದನ್ನು ಬಿಟ್ಟು ಒಳ್ಳೆಯದನ್ನು ಸ್ವೀಕರಿಸಬೇಕು ಎಂದು ಹೇಳಿದರು.

ಉಪಪ್ರಾಂಶುಪಾಲರಾದ ಗಂಗಾರತ್ನ ಮುಗುಳಿ, ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಭಟ್, ಸಾಂಸ್ಕೃತಿಕ ಸಂಘದ ಸಂಯೋಜಕ ಪ್ರವೀಣ ಪಿ. ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಗಂಗಾಸತ್ಯನಾರಾಯಣ ಹೆಗ್ಡೆ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಕಿತಾ ಎನ್. ನಿರೂಪಿಸಿದರು. ವಿದ್ಯಾರ್ಥಿ ನಾಯಕ ಕೌಶಿಕ್ ಬಲ್ಯಾಯ ವಂದಿಸಿದರು. ವಿದ್ಯಾರ್ಥಿಗಳು ಅತಿಥಿಗಳನ್ನು ಕಲಶ ಮತ್ತು ಚೆಂಡೆ, ವಾದ್ಯಗಳೊಂದಿಗೆ ಅರಶಿನ, ಕುಂಕುಮ ಹಚ್ಚಿ ಹಾಗೂ ಹೂ ನೀಡಿ, ಆರತಿ ಎತ್ತಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಎಲ್ಲರೂ ಸಾಂಪ್ರದಾಯಿಕ ಉಡುಗೆತೊಟ್ಟು ಸಂಭ್ರಮಿಸಿದರು.

Author Details


Srimukha

Leave a Reply

Your email address will not be published. Required fields are marked *