ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ

ವಿದ್ಯಾಲಯ

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾ ಕೂಟವನ್ನು ಸ್ಥಳೀಯ ಕಾರ್ಪೊರೇಟರ್ ಶಕೀಲಾ ಕಾವ ಉದ್ಘಾಟಿಸಿ, ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವಿಗೆ ಮಹತ್ವ ಕೊಡದೆ ಎಲ್ಲರೂ ಭಾಗವಹಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪಥಸಂಚಲನ ಗೌರವ ಸ್ವೀಕರಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತೇಜೋಮಯ ಅವರು ಮಾತನಾಡಿ, ಸಂಸ್ಥೆಯ ಜೊತೆಗಿನ ಅನನ್ಯ ಸಂಬಂಧವನ್ನು ನೆನಪಿಸಿ ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯನ್ನು ಶ್ಲಾಘಿಸಿದರು.

ಕ್ರೀಡಾ ತರಬೇತುದಾರರಾದ ಶ್ರೀ ಲಕ್ಷ್ಮಣ ರೈ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಯಂ ಟಿ ಭಟ್ ಮಾತನಾಡಿ ದೈಹಿಕ ವ್ಯಾಯಾಮಕ್ಕೆ ಕ್ರೀಡೆ ಮುಖ್ಯ ಎಂದರು.

ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ ಜೀವನ್ ದಾಸ್ ಉಪಸ್ಥಿತರಿದ್ದರು.

ಉಪನ್ಯಾಸಕಿ ಶ್ರೀಮತಿ ಮಾಧವಿ ಸ್ವಾಗತಿಸಿ, ಉಪನ್ಯಾಸಕ ಶ್ರೀ ಸಂಜಯ್ ಬೇಕಲ್ ವಂದಿಸಿದರು. ಉಪನ್ಯಾಸಕ ಅಶೋಕ್ ಎಸ್. ಕಾರ್ಯಕ್ರಮ ನಿರೂಪಿಸಿದರು.

ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉಪಸ್ಥಿತರಿದ್ದರು.

Author Details

Avatar
Srimukha

Leave a Reply

Your email address will not be published. Required fields are marked *