ಪ್ರತಿಭೆಯೊಂದಿಗೆ ಗುರು ಹಿರಿಯರ ಆಶೀರ್ವಾದ ಇದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ : ಚಿತ್ರ ನಟ ನಿರ್ದೇಶಕ ದಿನೇಶ್ ಅತ್ತಾವರ

ನಂತೂರು: ಸಿಯಾರ ಗಾಯ್ಸ್ ನಂತೂರು ಅವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಬಾರತೀ ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ನಡೆದ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಚಿತ್ರನಟ ದಿನೇಶ್ ಅತ್ತಾವರ ಅವರು ಭಾಗವಹಿಸಿ, ಮಾತನಾಡಿ ಗುರುಹಿರಿಯರು ತಂದೆ ತಾಯಿಯರನ್ನು ಗೌರವದಿಂದ ಕಾಣಬೇಕು ಎಂದರು. ತಮ್ಮ ಬಾಲ್ಯದ ನೆನಪನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕೆಲವು ನಾಟಕದ ಸಂಭಾಷಣೆಯನ್ನು ಹೇಲಿ ಎಲ್ಲರನ್ನು ರಂಜಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪದವಿ […]

Continue Reading

ದತ್ತು ಗ್ರಾಮದಲ್ಲಿ ಭತ್ತದ ಕೊಯ್ಲು

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ದತ್ತು ಸ್ವೀಕರಿಸಿದ ಕುರ್ನಾಡು ಗ್ರಾಮದ ಗದ್ದೆಯಲ್ಲಿ ಭತ್ತದ ಕೊಯ್ಲು ನೆರವೇರಿಸಿತು. ಪ್ರಾಂಶುಪಾಲ ಪ್ರೊ.ಜೀವನ್ ದಾಸ್ ಮಾರ್ಗದರ್ಶನದಲ್ಲಿ ಎನ್ನೆಸ್ಸೆಸ್ ಯೋಜನಾಧಿಕಾರಿ ಅಶೋಕ್ ಎಸ್., ಸಹಶಿಬಿರಾಧಿಕಾರಿ ಪ್ರವೀಣ್ ಪಿ. ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್ ಕುಮಾರ್ ಅವರ ನೇತೃತ್ವದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರು ಶುಕ್ರವಾರ ಬೆಳಗ್ಗೆ ಗದ್ದೆಗಿಳಿದು ಕೊಯ್ಲು ಆರಂಭಿಸಿದರು. ಅರ್ಧ ಎಕರೆ ಗದ್ದೆಯಲ್ಲಿ ಎಂ.ಆರ್.೪ ಮತ್ತು ಭದ್ರಾ […]

Continue Reading

ಮಾತೃ ಭಾಷೆಯನ್ನು ಗೌರವಿಸಿ ಉಳಿಸಿ – ದೇವು ಹನೆಹಳ್ಳಿ

ನಂತೂರು: ನಾವು ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಆಗ ನಾವು ಮತ್ತು ಭಾಷೆಯ ಅಭಿವೃದ್ದಿ ಸಾಧ್ಯ ಎಂದು ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ದೇಶಕ ದೇವು ಹನೆಹಳ್ಳಿ ಹೇಳಿದರು.   ಅವರು ನ.೨ರಂದು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆಶ್ರಯ ದಲ್ಲಿ ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.   ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಆಚರಣೆಗಳು […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಮಾತಾ ಪಿತೃಪೂಜೆ

ಹಂಪಿನಗರ: ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆಯಾದ ಶ್ರೀಭಾರತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೂರಾರು ವಿದ್ಯಾರ್ಥಿಗಳು ತಮ್ಮ ಜನ್ಮದಾತರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.   ಕಣ್ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿಯನ್ನು ನೆನಪಿಸುವ ಉದ್ದೇಶದಿಂದ ಪರಮಪೂಜ್ಯ ಶ್ರೀಮಜ್ಜಗದ್ಗುಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಗತ್ಪಾಲಕರಾದ ಪಾರ್ವತಿ ಪರಮೇಶ್ವರರಿಗೆ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ತಾವು ಪಾಲಕರನ್ನು ನೋಡಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂಸ್ಕಾರದ ಬೆಳಕಿನಲ್ಲಿ ಸಾಧನೆಯ ಹೆಜ್ಜೆಯನ್ನಿಡುವಂತೆ ಸಹಕರಿಸುವ ತಾಯಿ ತಂದೆಯರನ್ನು ಬದುಕಿಡೀ ಸಲಹುವ ಶಪಥವನ್ನು […]

Continue Reading

ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ಶ್ರೀಸಂಸ್ಥಾನ

ಬೆಂಗಳೂರು: ಭಾರತೀಯ ವಿದ್ಯೆ ಹಾಗೂ ಕಲೆಗಳನ್ನು ಒಂದೇ ಕಡೆ ಬೋಧಿಸುವ ವ್ಯವಸ್ಥೆ ದೇಶದಲ್ಲೆಲ್ಲೂ ಇಲ್ಲ. ಆದ್ದರಿಂದ ಸಮಗ್ರ ಭಾರತೀಯ ಕಲೆ, ವಿದ್ಯೆಗಳನ್ನು ಪರಿಚಯಿಸುವುದೇ ಉದ್ದೇಶಿತ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶವಾಗಿದೆ. ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಯಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.   ಗಿರಿನಗರ ರಾಮಾಶ್ರಮದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂವಾದ ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು ಆಶೀರ್ವಚನ ನೀಡಿದರು.   ದೇಶದ ಬಗ್ಗೆ […]

Continue Reading