ಮೂರೂರು: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಗುರುಗಳಾದ ಶ್ರೀ ಎಮ್.ಜಿ. ಭಟ್ ಮಾತನಾಡಿ, ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಬೆಳೆಸಿಕೊಳ್ಳಿ. ಮಾನವೀಯ ಮೌಲ್ಯಗಳೊಂದಿಗೆ ಸರ್ವತೋಮುಖವಾಗಿ ಅಧ್ಯಯನದಲ್ಲಿ ಪ್ರಗತಿ ಹೊಂದಿ ಸಾಧಕರಾಗಿ ಎಂದು ಕರೆ ನೀಡಿದರು.
ಅಲ್ಲದೇ ಎಸ್. ಎಸ್. ಎಲ್. ಸಿ. ಮಕ್ಕಳಿಗೆ ಶಾಲೆಯ ಸವಿನೆನಪಿಗಾಗಿ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು. ಶ್ರೀ ಲೋಕೇಶ್ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಜಿ. ಆರ್. ನಾಯ್ಕ್ ಸ್ವಾಗತಿಸಿದರು. ಶ್ರೀ ಮನೋಹರ ಹರಿಕಂತ್ರ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ವಿತರಿಸಲಾಯಿತು.