ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ಮಾತಾಪಿತೃ ಪೂಜೆ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.
ಶಾಲೆಯ ಶಂಕರಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾತಾಪಿತೃ ಪೂಜೆ ಕಾರ್ಯಕ್ರಮದಲ್ಲಿ 10ನೆಯ ತರಗತಿಯ ಮಕ್ಕಳು ತಮ್ಮ ತಂದೆ-ತಾಯಿಗಳ ಪಾದಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಶ್ರೀ ಕೇಶವ ಭಟ್ ದಿವಾಣ ಮಾತನಾಡಿ, ತಂದೆ-ತಾಯಿ ನಮ್ಮ ಕಣ್ಣಿಗೆ ಕಾಣುವ ದೇವರು. ಅವರ ಆಶೀರ್ವಾದ ಇದ್ದಾಗ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯ ಎಂದರು. ಹೆತ್ತವರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳುವ ಮೂಲಕ ನಮ್ಮ ಕರ್ತವ್ಯ ಪಾಲಿಸಬೇಕು ಎಂದರು.
ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಕೆ. ಶಂಕರ್ ಭಟ್, ಪ್ರಾಂಶುಪಾಲೆ ಶ್ರೀಮತಿ ವಿದ್ಯಾಭಟ್, ಉಪನ್ಯಾಸಕರು , ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.