ಮೂರೂರು: ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನವೆಂಬರ್ 27 ಮತ್ತು 28ರಂದು ಎರಡು ದಿನಗಳ ಕ್ರೀಡೋತ್ಸವ ಜರುಗಿತು.
27ರಂದು ಆಡಳಿತ ಮಂಡಳಿಯ ಸದಸ್ಯ ಶ್ರೀ ಟಿ. ಆರ್. ಜೋಷಿ ಕ್ರೀಡೋತ್ಸವವನ್ನು ಉದ್ಘಾಟಿಸಿ, ಮಾತನಾಡಿ, ಮಕ್ಕಳೆಲ್ಲರೂ ಸ್ಪರ್ಧಾತ್ಮಕ ಮನೋಭಾವ ಮತ್ತು ಸಂಭ್ರಮದಿಂದ ಭಾಗವಹಿಸಬೇಕು ಎಂದು ಹೇಳಿದರು.
ಕ್ರೀಡೋತ್ಸವದಲ್ಲಿ ಓಟ, ಚಕ್ರ ಎಸೆತ, ಗುಂಡೆಸೆತ, ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ಕಬಡ್ಡಿಗಳನ್ನು ಆಯೋಜಿಸಲಾಗಿತ್ತು.
ಪ್ರಾಥಮಿಕ ಶಾಲೆ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಶ್ರೀಧರ ಸಂಸ್ಕೃತ ಪಾಠಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದರು.