ನಂತೂರು: ಮಂಗಳೂರು ನಂತೂರು ಶ್ರೀಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀ ಸಭಾಭವನದಲ್ಲಿ ಶ್ರೀಭಾರತೀ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ದಿನಾಚರಣೆಯನ್ನು ಮಾರ್ಚ್ 16ರಂದು ನಡೆಸಲಾಯಿತು. ವಕೀಲರು ಮತ್ತು ನೋಟರಿ ಶ್ರೀ ರಾಮಚಂದ್ರ ಭಟ್ಟ ಮಾಣಿಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ಭಾರತೀ ವಿದ್ಯಾಸಂಸ್ಥೆಯು ಸಂಸ್ಕೃತಿಯ ದೇಗುಲ. ವಿದ್ಯಾದೇಗುಲದಲ್ಲಿ ಸಂಸ್ಕೃತಿಯೊಂದಿಗೆ ವಿದ್ಯೆಯನ್ನು ನೀಡುವುದು, ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದಕ್ಕೆ ಸಹಕಾರಿ, ಎಂದು ಹೇಳಿದರು. ಶ್ರೀಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಈಶ್ವರಪ್ರಸಾದ್ ಎ. ಅಧ್ಯಕ್ಷತೆ ವಹಿಸಿ ಮಾತನಾಡಿ, ವೇದಪುರಾಣಗಳ ಕಾಲದಲ್ಲಿಯೇ ಸಂಸ್ಕಾರಯುತ ಶಿಕ್ಷಣಕ್ಕೆ ಹಿರಿಯರು ಹೆಚ್ಚಿನ ಒತ್ತು ನೀಡಿದ್ದರು. ವಿದ್ಯಾರ್ಥಿಗಳಲ್ಲಿ ಸಂಸ್ಕೃತಿಯ ಉಳಿವಿನ ಪಾಠ ಬೆಳೆದು ಹೆಮ್ಮರವಾಗಲಿ, ಎಂದು ಆಶಿಸಿದರು. ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸುಕನ್ಯಾ ಸಿ. ಮಾತನಾಡಿ, ಭಾರತ ದೇಶ ಸಂಸ್ಕೃತಿಯ ತವರೂರು, ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾರೂ ಹೀಯಾಳಿಕೆಗೆ ಗುರಿಯಾಗುವುದಿಲ್ಲ. ನಮ್ಮ ಎಲ್ಲ ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳಿವೆ. ವಿದ್ಯಾರ್ಥಿ ಜೀವನದಲ್ಲಿ ಸಂಸ್ಕೃತಿಗೆ ಹೆಚ್ಚಿನ ಮಹತ್ತ್ವ ನೀಡಿದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹೇಳಿದರು. ನಮ್ಮ ಕುಡ್ಲ ಚಾನಲ್ ನ್ಯೂಸ್ ರೀಡರ್ ಶ್ರೀಮತಿ ಪ್ರಿಯಾ ಹರೀಶ್ ಶೆಟ್ಟಿ ಮಾತನಾಡಿ, […]
Continue Reading