ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಚುನಾವಣಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕು. ಸುಮುಖ ಭಟ್ಟ ಹಾಗೂ ಕು. ಸುಜಯ ಭಟ್ಟ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಶಿಕ್ಷಕವೃಂದ ಇವರನ್ನು ಅಭಿನಂದಿಸಿದೆ ಹಾಗೂ ಮುಂದಿನ ಹಂತದ ಸ್ಪರ್ಧೆಗೆ ಶುಭಕೋರಿದೆ.