ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಕುರಿತು ಒಲವು ಮೂಡಿಸುವ ಹಾಗೂ ಭಾಷೆಯ ವ್ಯಾಪಕ ಬಳಕೆಗೆ ಪೂರಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಶ್ರೀ ಭಾರತೀ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ನಡೆದ ಸಂಸ್ಕೃತೋತ್ಸವವು ಯಶಸ್ವಿಯಾಗಿ ಸಂಪನ್ನಗೊಂಡಿತು.
ಸಮಾರೋಪ ಸಮಾರಂಭಕ್ಕೆ ಗುರುವಂದನೆ ಹಾಗೂ ದೀಪೋಜ್ವಲನದ ಮೂಲಕ ಚಾಲನೆ ನೀಡಲಾಯಿತು. ಅಲ್ಲದೇ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶ್ರೀಮತಿ ಡಾ. ಶಾರದಾ ಜಯಗೋವಿಂದ್ ಇವರು ಉಪಸ್ಥಿತರಿದ್ದರು. ಶಾಲೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಹೆಗಡೆ, ಕಾರ್ಯದರ್ಶಿ ಶ್ರೀ ಪ್ರಮೋದ ಪಂಡಿತ್, ಸಹ ಕಾರ್ಯದರ್ಶಿ ಶ್ರೀ ಗೋವಿಂದರಾಜ ಕೋರಿಕ್ಕಾರು, ಹಿರಿಯ ವಿಜ್ಞಾನಿ ಶ್ರೀ ಪಿ.ಜೆ. ಭಟ್ಟ ಇವರುಗಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷೆಯ ಮಹತ್ತ್ವದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳೇ ಕಾರ್ಯಕ್ರಮ ನಡೆಸಿಕೊಟ್ಟರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.