ವಿದ್ಯಾರ್ಥಿಗಳಿಗೆ ಕಾರ್ಯಾಗಾರ : ಪರೀಕ್ಷೆ ಎದುರಿಸುವ ವಿಧಾನ – ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ

ಶಿಕ್ಷಣ ಸುದ್ದಿ

ನಲ್ಯಪದವು: ಪಠ್ಯವನ್ನು ಮನನ ಮಾಡಿಕೊಳ್ಳುವ ಹಾಗೂ ಪರೀಕ್ಷೆಯನ್ನು ಎದುರಿಸುವ ವಿಧಾನಗಳು, ಹತ್ತನೆಯ ತರಗತಿಯ ಅನಂತರ ಎದುರಿಸುವ ಸವಾಲುಗಳು ಹಾಗೂ ಅವಕಾಶಗಳ ಬಗ್ಗೆ ಸಂಸ್ಥೆಯ ಶಿಕ್ಷಣ ಸಂಯೋಜಕರಾದ ಪ್ರೊ. ವಿಶ್ವೇಶ್ವರ ಭಟ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

 

ಶ್ರೀಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾದಿಂದ ನಲ್ಯಪದವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಯಾವುದೇ ರೀತಿಯಲ್ಲೂ ಭಯಪಡದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಾಗಾರದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕುಮಾರಿ, ಕಂಪ್ಯೂಟರ್ ಸಯನ್ಸ್ ಉಪನ್ಯಾಸಕ ಶ್ರೀ ಅನಂತನಾರಾಯಣ ಮತ್ತು ಉಪನ್ಯಾಸಕಿ ಶ್ರೀಮತಿ ಮಾಧವಿ ಉಪಸ್ಥಿತರಿದ್ದರು.

Author Details


Srimukha

Leave a Reply

Your email address will not be published. Required fields are marked *