29.01.2019

ದಿನ ಭವಿಷ್ಯ

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /ನವಮೀ ತಿಥಿ/
ಮಂಗಳವಾರ/ ವಿಶಾಖಾ ನಕ್ಷತ್ರ /

ದಿನಾಂಕ: 29.01.2019

°•°•°•°•°•°

ಮೇಷ

ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ತಕ್ಕಮಟ್ಟಿನ ಏಳಿಗೆ ಕಂಡುಬಂದರೂ ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಶೀತ ಜ್ವರ ಮುಂತಾದ ತೊಂದರೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ.

ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°•°•°•°•°•°

ವೃಷಭ

ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಕಂಡುಬರಲಿದ್ದು ಆರ್ಥಿಕ ವ್ಯವಸ್ಥೆಯಲ್ಲಿ ಮುನ್ನಡೆ ಕಾಣುವಿರಿ. ದಾಂಪತ್ಯ ಜೀವನದಲ್ಲಿ ಸುಖ, ಶಾಂತಿ ನೆಲೆಸುವುದು. ವಿವಾಹಾಕಾಂಕ್ಷಿಗಳಿಗೆ ವಿವಾಹಾದಿ ಯೋಗ ಭಾಗ್ಯಗಳು ಒದಗಿ ಬರುವುದು. ದೂರ ಪ್ರಯಾಣ ಮಾಡಬೇಕಾಗಿ ಬರುವುದು. ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಸುಸಮಯ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°•°•°•°•°•°

ಮಿಥುನ

ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆ ಕಂಡುಬರುತ್ತದೆ. ಆರ್ಥಿಕವಾಗಿಯೂ ಹಿನ್ನಡೆಯನ್ನು ಕಾಣುವಿರಿ. ಶತ್ರುಭಯ, ಚೋರಭಯ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ. ಶೀತ ಜ್ವರ ತಲೆನೋವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ
ಕಂಸಚಾಣೂರಮರ್ದನಮ್|
ದೇವಕೀಪರಮಾನನ್ದಂ
ಕೃಷ್ಣಂ ವನ್ದೇ ಜಗದ್ಗುರುಮ್ ||

°•°•°•°•°•°

ಕರ್ಕಾಟಕ

ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಾಣುವಿರಿ. ಆರ್ಥಿಕವಾಗಿ ನಿಧಾನಗತಿಯ ಮುನ್ನಡೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋಸ್ತುತೇ ||

°•°•°•°•°•°

ಸಿಂಹ

ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ. ಧನಲಾಭ, ವಾಹನಲಾಭ ಭೂಲಾಭ ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಸುಖ. ಉದರ ಸಂಬಂಧಿ ತೊಂದರೆ ಬರುವಂತಹ ಲಕ್ಷಣಗಳಿದ್ದು ಆಹಾರದಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

°•°•°•°•°•°

ಕನ್ಯಾ

ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ. ಆರ್ಥಿಕವಾಗಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ಮೈ ಕೈ ಗಂಟು ನೋವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಕಠಿಣ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

°•°•°•°•°•°

ತುಲಾ

ಉದ್ಯೋಗ ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ. ಹಣಕಾಸಿನ ವಿಚಾರದಲ್ಲಿಯೂ ಏಳಿಗೆಯನ್ನು ಪಡೆಯುವಿರಿ. ಕುಟುಂಬದಲ್ಲಿ ಮನಶ್ಶಾಂತಿ ನೆಲೆಯೂರುವುದು. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ.

ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ

°•°•°•°•°•°

ವೃಶ್ಚಿಕ

ವ್ಯವಹಾರದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುವುದು. ಆರ್ಥಿಕ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ಕುಟುಂಬದಲ್ಲಿ ಕಲಹ. ಆರೋಗ್ಯದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.

ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಂ
ಗುಹಂ ಸದಾ ಶರಣಮಹಂ ಪ್ರಪದ್ಯೇ ||

°•°•°•°•°•°

ಧನು

ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಇದ್ದರೂ ಆರ್ಥಿಕವಾಗಿ ಅನಾವಶ್ಯಕ ಖರ್ಚುವೆಚ್ಚ ಒದಗಿಬರುವುದು. ಶೀತ ಜ್ವರ, ಮೂತ್ರ ಸಂಬಂಧಿ, ಉದರ ಸಂಬಂಧಿ ಕಾಯಿಲೆಗಳು ಬರುವಂತಹ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳು ಉದಾಸೀನತೆಯನ್ನು ಬಿಟ್ಟು ಕಠಿಣ ಪರಿಶ್ರಮದಿಂದ
ಮುಂದುವರಿದಲ್ಲಿ ಮಾತ್ರ ಶುಭ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°•°•°•°•°•°

ಮಕರ

ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ ಕಂಡುಬಂದರೂ ಆರ್ಥಿಕ ಹಿನ್ನಡೆಯನ್ನು ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಕಲಹ ಕಂಡುಬರುವುದರಿಂದ ಮನಃಶಾಂತಿ ಕಳೆದುಕೊಳ್ಳುವಿರಿ. ಚರ್ಮ ಸಂಬಂಧಿ ತೊಂದರೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

°•°•°•°•°•°

ಕುಂಭ

ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರಲಿದ್ದು ಆರ್ಥಿಕ ದುಂದುವೆಚ್ಚ ಮಾಡದಿರಿ. ಆರೋಗ್ಯದಲ್ಲಿ ನಿಧಾನಗತಿಯ ಸುಧಾರಣೆ. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಏಳಿಗೆ ಸಾಧ್ಯ.

ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಂ
ಕಿಂ ನೋ ಮೃತ್ಯುಃ ಕರಿಷ್ಯತಿ ||

°•°•°•°•°•°

ಮೀನ

ವ್ಯಾವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ. ಉದಾಸೀನತೆಯನ್ನು ಬದಿಗೊತ್ತಿ ಮುಂದುವರಿಯಿರಿ. ಆರ್ಥಿಕ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಸ್ವಪ್ರಯತ್ನದಿಂದ ಉತ್ತಮ ಏಳಿಗೆ.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

ಜಪಿಸಲು:
ಶಾಂತಾಕಾರಂ ಭುಜಗಶಯನಂ
ಪದ್ಮನಾಭಂ ಸುರೇಶಂ
ವಿಶ್ವಾಧಾರಂ ಗಗನಸದೃಶಂ
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಂ
ಯೋಗಿಹೃದ್ಧ್ಯಾನಗಮ್ಯಂ
ವಂದೇ ವಿಷ್ಣುಂ ಭವಭಯಹರಂ
ಸರ್ವಲೋಕೈಕನಾಥಮ್ ||

°•°•°•°•°•°

{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *